ಪಕ್ಕದ ಮನೆ ಮಹಿಳೆ ಮೇಲೆ ಗುಂಡಿನ ದಾಳಿ; ಸ್ಥಳದಲ್ಲೆ ಸಾವು

First Published 23, Feb 2018, 4:58 PM IST
Shoot on lady
Highlights

ಮಹಿಳೆಯೊಬ್ಬರ ಮೇಲೆ ಗುಂಡಿನ‌ ದಾಳಿ ನಡೆದಿದ್ದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಡಿಕೇರಿ ತಾಲೂಕಿನ ಕಾಲೂರು ಗ್ರಾಮದಲ್ಲಿ ನಡೆದಿದೆ. 

ಕೊಡಗು (ಫೆ.23): ಮಹಿಳೆಯೊಬ್ಬರ ಮೇಲೆ ಗುಂಡಿನ‌ ದಾಳಿ ನಡೆದಿದ್ದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಡಿಕೇರಿ ತಾಲೂಕಿನ ಕಾಲೂರು ಗ್ರಾಮದಲ್ಲಿ ನಡೆದಿದೆ. 

ಮಹಿಳೆಗೆ ಗುಂಡಿಟ್ಟು‌ ಕೊಂದ ವ್ಯಕ್ತಿಯೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಾಲೂರು ನಿವಾಸಿ ಚೋಂದಮ್ಮ ಲಲಿತಾ ಮೃತಪಟ್ಟ ಮಹಿಳೆ. ಪಕ್ಕದ ಮನೆಯ ಧರ್ಮರಾಜ್ ಎಂಬಾತ ಗುಂಡಿನ ದಾಳಿ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡ‌ ಧರ್ಮರಾಜ್’ನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಯಾರೂ ಮನೆಯಲ್ಲಿ ಇಲ್ಲದ ವೇಳೆ ಈ ಘಟನೆ ನಡೆದಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ, ಕ್ಷುಲ್ಲಕ ಕಾರಣ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 
 

loader