2018ರಲ್ಲಿ ನಡೆಯಲಿರುವ ಗೊಮ್ಮಟೇಶ್ವರನ ಮಹಾಮಸ್ತಕಾಭಿಷೇಕಕ್ಕೆ ಸಿದ್ಧವಾಗುತ್ತಿರುವ ಹೊತ್ತಿನಲ್ಲಿಯೇ ಶ್ರವಣಬೆಳಗೊಳವನ್ನು ಸ್ವಚ್ಛ ಐತಿಹಾಸಿಕ ಸ್ಥಳಗಳ ಅಡಿಯಲ್ಲಿ ಅಭಿವೃದ್ಧಿಗೆ ಆಯ್ಕೆ ಮಾಡಲಾಗಿದೆ.
ನವದೆಹಲಿ(ನ.26): ವಿಶ್ವವಿಖ್ಯಾತ ಗೊಮ್ಮಟೇಶ್ವರ ವಿಗ್ರಹ ಇರುವ ಶ್ರವಣಬೆಳಗೊಳ ಎರಡನೇ ಹಂತದ ಸ್ವಚ್ಛ ಐತಿಹಾಸಿಕ ಸ್ಥಳಗಳಲ್ಲಿ ಗುರುತಿಸಲಾದ 10 ಪಾರಂಪರಿಕ ಸ್ಥಳಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಸ್ವಚ್ಛ ಐತಿಹಾಸಿಕ ಸ್ಥಳಗಳ ಅಭಿವೃದ್ಧಿಯ ಕುರುತು ದೆಹಲಿಯಲ್ಲಿ ನಡೆದ ಎರಡು ದಿನಗಳ ರಾಷ್ಟ್ರೀಯ ಸಮಾಲೋಚನೆಯ ವೇಳೆ ಎರಡನೇ ಹಂತದ ಯೋಜನೆಗೆ ಆಯ್ಕೆಯಾದ ಸ್ಥಳಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.
2018ರಲ್ಲಿ ನಡೆಯಲಿರುವ ಗೊಮ್ಮಟೇಶ್ವರನ ಮಹಾಮಸ್ತಕಾಭಿಷೇಕಕ್ಕೆ ಸಿದ್ಧವಾಗುತ್ತಿರುವ ಹೊತ್ತಿನಲ್ಲಿಯೇ ಶ್ರವಣಬೆಳಗೊಳವನ್ನು ಸ್ವಚ್ಛ ಐತಿಹಾಸಿಕ ಸ್ಥಳಗಳ ಅಡಿಯಲ್ಲಿ ಅಭಿವೃದ್ಧಿಗೆ ಆಯ್ಕೆ ಮಾಡಲಾಗಿದೆ. ಈ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರ 100 ಸ್ಥಳಗಳನ್ನು ಗುರುತಿಸಿದ್ದು, ಮೊದಲ ಎರಡು ಹಂತದಲ್ಲಿ ತಲಾ 10 ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ. ಇದರಿಂದ ಶ್ರವಣಬೆಳಗೊಳವೂ ಪ್ರಯೋಜನ ಪಡೆದುಕೊಳ್ಳಲಿದೆ ಎಂದು ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದೇ ವೇಳೆ ಶ್ರವಣಬೆಳಗೊಳದ ಅಭಿವೃದ್ಧಿಗೆ 50 ಕೋಟಿ ರು. ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿರುವುದಾಗಿ ಅವರು ಹೇಳಿದ್ದಾರೆ.
