ರಾಜ್ಯ ರಾಜಕೀಯದಲ್ಲಿ  ಸಾಕಷ್ಟು ಕುತೂಹಲ ಕೆರಳಿಸಿರುವ ನಂಜನಗೂಡು, ಗುಂಡ್ಲುಪೇಟೆ  ವಿಧಾನಸಭೆ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಎರಡೂ ಪಕ್ಷಗಳ ಘಟಾನುಘಟಿ   ನಾಯಕರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ

ಮೈಸೂರು(ಮಾ.28): ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿರುವ ನಂಜನಗೂಡು, ಗುಂಡ್ಲುಪೇಟೆ ವಿಧಾನಸಭೆ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಎರಡೂ ಪಕ್ಷಗಳ ಘಟಾನುಘಟಿ ನಾಯಕರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಸಂಸದ ಬಿ. ಶ್ರೀರಾಮುಲು ಮಾತನಾಡಿ, ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಹಲವು ಕ್ಷೇತ್ರಗಳನ್ನು ದತ್ತು ಪಡೆದಂತೆ ಅಭಿವೃದ್ಧಿ ಪಡಿಸಿದ್ದೇವೆ. ಯಡಿಯೂರಪ್ಪನವರ ಬಗ್ಗೆ ಮಾತನಾಡಲು ಕಾಂಗ್ರೆಸ್ ನವರಿಗೆ ಗಟ್ಟಿ ಗುಂಡಿಗೆ ಬೇಕು, ಕೇವಲ ಸುಳ್ಳು ಆಶ್ವಾಸನೆಗಳನ್ನು ನೀಡಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರ ಗೆದ್ದಂತೆ ಇಲ್ಲಿ ಗೆಲ್ಲಲು ಆಗುವುದಿಲ್ಲ, ಇಲ್ಲಿನ ಜನ ನಿಮಗೆ ಸೊಪ್ಪು ಹಾಕೊಲ್ಲ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ನೀವು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸಿದರೆ ನಾನು ರಾಜಕೀಯದಿಂದಲೇ ನಿವೃತ್ತಿಯಾಗುತ್ತೇನೆ ಎಂದು ಸಿ ಎಂ ಸಿದ್ದರಾಮಯ್ಯ ಗೆ ಬಹಿರಂಗ ಸವಾಲೆಸೆದರು. ಈ ಮೂಲಕ ಕ್ಷೇತ್ರ ದತ್ತು ಪಡೆದು ಅಭಿವೃದ್ದಿ ಪಡಿಸುತ್ತೇವೆಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಕ್ಕ ತಿರುಗೇಟು ನೀಡಿದರು.