ಬಳ್ಳಾರಿ :  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಮುಖಂಡ ಕೆ.ಎಸ್‌.ಈಶ್ವರಪ್ಪ ಅವರು ಕುರುಬ ಸಮಾಜದ ಎರಡು ಕಣ್ಣುಗಳಿದ್ದಂತೆ. 

ಸಿದ್ದರಾಮಯ್ಯರಂತೆ ಈಶ್ವರಪ್ಪನವರೂ ಮುಂದೊಂದು ದಿನ ಮುಖ್ಯಮಂತ್ರಿ ಆಗುತ್ತಾರೆಂಬ ವಿಶ್ವಾಸ ನನಗಿದೆ ಎಂದು ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ ಅಭಿಪ್ರಾಯಪಟ್ಟರು.

ಇಲ್ಲಿನ ಜೋಳದರಾಶಿ ಡಾ. ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಕನಕದಾಸ ಜಯಂತಿ ಸಮಾರಂಭದಲ್ಲಿ ಮಾತನಾಡಿ, ನನಗೂ ಸಿದ್ದರಾಮಯ್ಯನವರಿಗೂ ಅವಿನಾವಭಾವ ಸಂಬಂಧವಿದೆ. 

ಎಲ್ಲೇ ಕಂಡರೂ ಅವರು ನನ್ನನ್ನು ಪ್ರೀತಿಯಿಂದ ಮಾತನಾಡಿಸುತ್ತಾರೆ. ನನ್ನ ಮೇಲೆ ಅವರಿಗೆ ವಿಶೇಷ ಪ್ರೀತಿ. ರಾಜಕೀಯವೇ ಬೇರೆ, ಸ್ನೇಹವೇ ಬೇರೆ. ನಾನು ಎಂದೂ ದ್ವೇಷದ ರಾಜಕೀಯ ಮಾಡಿಲ್ಲ. ಒಂದು ವೇಳೆ ಅಂತಹ ಪ್ರಸಂಗ ಬಂದರೆ ರಾಜಕೀಯದಿಂದಲೇ ದೂರ ಉಳಿಯುತ್ತೇನೆಯೇ ಹೊರತು ದ್ವೇಷ ಮಾಡುವುದು ಗೊತ್ತಿಲ್ಲ ಎಂದರು.