ಬೆಂಗಳೂರು :  ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಹಾಗೂ ಜೆಡಿಎಸ್ ವಿರುದ್ಧ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ಶಾಸಕರು ಹಾಗೂ ಸಚಿವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ರಾಹುಲ್ ಗಾಂಧಿ ಸಮ್ಮುಖ ದಲ್ಲಿ ಬಲವಾಗಿ ಸಮರ್ಥಿಸಿ ಕೊಂಡಿದ್ದಾರೆ. 

ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರಿ ಗೆ ಸಮಸ್ಯೆಗಳಿವೆ. ಜೆಡಿಎಸ್‌ನವರು ನಮ್ಮ ಬೆಂಬಲದಿಂದ ಸರ್ಕಾರ ರಚಿಸಿರುವುದನ್ನು ಮರೆತು ದಬ್ಬಾಳಿಕೆ ನಡೆಸುತ್ತಿದ್ದಾರೆ. 

ಇದ ರಿಂದಾಗಿ ಕಾಂಗ್ರೆಸ್ ಶಾಸಕರು ಸರ್ಕಾರ, ಜೆಡಿಎಸ್ ವಿರುದ್ಧ ಹೇಳಿಕೆಗಳನ್ನು ನೀಡು ವಂತಾಗಿದೆ. ಜತೆಗೆ ಇಂತಹ ಹೇಳಿಕೆಗಳಿಗೆ ಜೆಡಿಎಸ್‌ನವರು ತಮ್ಮ ಹೇಳಿಕೆಗಳ ಮೂಲಕ ಪ್ರಚೋದನೆ ನೀಡುತ್ತಿದ್ದಾರೆ ಎಂದು ದೂರಿದ್ದಾರೆ. ನಾವೇ ಹೇಳಿಕೆ ನೀಡದಂತೆ ತಡೆದಿದ್ದೇವೆ ಎಂದು ಅಸಹಾ ಯಕತೆ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.