ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿನ ಚರ್ಚೆ ಕಾವೇರುತ್ತಿರುವ ಬೆನ್ನಲ್ಲೇ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್​ ಮುಂದಾಗಿದೆ. ಆಪರೇಷನ್ ಕಮಲಕ್ಕೆ ಬ್ರೇಕ್ ಹಾಕಲು ಖುದ್ದು ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರು ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರ ಹೆಗಲಿಗೆ ಹಾಕಿದ್ದಾರೆ. 

ಬೆಂಗಳೂರು, [ಸೆ.22]: ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿನ ಚರ್ಚೆ ಕಾವೇರುತ್ತಿರುವ ಬೆನ್ನಲ್ಲೇ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್​ ಮುಂದಾಗಿದೆ.

ಆಪರೇಷನ್ ಕಮಲಕ್ಕೆ ಬ್ರೇಕ್ ಹಾಕಲು ಖುದ್ದು ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರು ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರ ಹೆಗಲಿಗೆ ಹಾಕಿದ್ದಾರೆ. 

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರಲ್ಲಿ ಎದ್ದಿರುವ ಅಸಮಾಧಾನವನ್ನು ತಣ್ಣಗಾಗಿಸಲು ಸಿದ್ದು ಅಖಾಡಕ್ಕೆ ಇಳಿದಿದ್ದಾರೆ. ಸಿದ್ದರಾಮಯ್ಯ ಅವರು ಇದೇ ಸೆಪ್ಟೆಂಬರ್​ 25 ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. 

ನಗರದ ಖಾಸಗಿ ಹೋಟೆಲ್​ನಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದ್ದು, ಶಾಸಕರನ್ನು ಪಕ್ಷದಲ್ಲಿಯೇ ಹಿಡಿದಿಟ್ಟುಕೊಳ್ಳುವ ಕುರಿತು ಸಿದ್ದರಾಮಯ್ಯ ಅವರು ಮಾಸ್ಟರ್​ ಪ್ಲಾನ್ ಮಾಡಿದ್ದಾರೆ. ​ 

ಪ್ರಸ್ತುತ ನಡೆದಿರುವರಾಜಕೀಯ ಬೆಳವಣಿಗೆ ಬಗ್ಗೆ ಸಲಹೆಗಳನ್ನ ಪಡೆಯಲು ಸ್ವತಃ ಕುಮಾರಸ್ವಾಮಿ ಅವರೇ ಶುಕ್ರವಾರ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಹಲವು ಮಹತ್ವದ ವಿಷಯಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದರು.