ಸಿದ್ದರಾಮಯ್ಯ ಸಿಎಂ ಆಗಿ ಇಂದಿಗೆ 5 ವರ್ಷ!

Siddaramaiah Completes 5th year as CM on May 13
Highlights

  • 5 ವರ್ಷಗಳ ಹಿಂದೆ ಮೇ.13ರಂದು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದ ಸಿದ್ದರಾಮಯ್ಯ 
  • 2013ರ ವಿಧಾನಸಭಾ ಚುನಾವಣೆಯಲ್ಲಿ  ಸರಳ ಬಹುಮತ ಪಡೆದು ಅಧಿಕಾರಕ್ಕೇರಿದ್ದ ಕಾಂಗ್ರೆಸ್

ಬೆಂಗಳೂರು [ಮೇ.13]: ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು 5 ವರ್ಷಗಳನ್ನು ಪೂರೈಸಿದ್ದಾರೆ.

13 ಮೇ 2013ರಲ್ಲಿ ಕರ್ನಾಟಕದ 22ನೇ ಮುಖ್ಯಮಂತ್ರಿಯಾಗಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸುಮಾರು 50 ಸಾವಿರ ಜನರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು.ಆಗಿನ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಜ್ ಪ್ರತಿಜ್ಞಾವಿಧಿಯನ್ನು ಬೋಧಿಸಿದ್ದರು. 

ಸಿದ್ದರಾಮಯ್ಯ ಆ ದಿನವನ್ನು ನೆನಪಿಸಿಕೊಂಡಿದ್ದಾರೆ.  ಕಳೆದ 5 ವರ್ಷಗಳಲ್ಲಿ ನುಡಿದಂತೆ ನಡೆದ ತೃಪ್ತಿ ಇದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ. 

ಪ್ರಮಾಣವಚನ ಸಮಾರಂಭದಲ್ಲಿ ಹಿರಿಯ ಸಾಹಿತಿ ಡಾ. ಎಂ.ಎಂ. ಕಲ್ಬುರ್ಗಿ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದರು. ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡ, ಆಗಿನ ಕೆಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರಲಿಲ್ಲ.

ಸತ್ಯದ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದ್ದ ಸಿದ್ದರಾಮಯ್ಯ, ಅದೇ ದಿವಸ ತಮ್ಮ ಪಕ್ಷದ ಪ್ರಮುಖ ಭರವಸೆ ಹಾಗೂ ಮಹಾತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯನ್ನು ಘೋಷಿಸಿದ್ದರು.

2013 ಮೇ.5 ರಂದು ಪ್ರಕಟವಾದ ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ 122 ಸ್ಥಾನಗಳನ್ನು ಗಳಿಸುವ ಮೂಲಕ ಸರಳ ಬಹುಮತವನ್ನು ಪಡೆದುಕೊಂಡಿತ್ತು.

loader