ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುವ ಮುನ್ನ ಸಿದ್ದರಾಮಯ್ಯ ಅವರು ಯಾರ್ಯಾರ ಕದ ತಟ್ಟಿದ್ದಾರೆ ಎಂಬುದನ್ನು ಅವರೇ ಪ್ರಶ್ನಿಸಿಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು: ಕಾಂಗ್ರೆಸ್ಗೆ ಸೇರ್ಪಡೆಗೊಳ್ಳುವ ಮುನ್ನ ಸಿದ್ದರಾಮಯ್ಯ ಅವರು ಯಾರ್ಯಾರ ಕದ ತಟ್ಟಿದ್ದಾರೆ ಎಂಬುದನ್ನು ಅವರೇ ಪ್ರಶ್ನಿಸಿಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬಿಜೆಪಿ ಸೇರುವ ಬಗ್ಗೆ ನಡೆದ ಘಟನಾವಳಿ ಸಂದರ್ಭದಲ್ಲಿ ಯಾರು ಮಧ್ಯವರ್ತಿಯಾಗಿದ್ದರು, ಅವರು ಮಾಡಿದ ಕೆಲಸಗಳೇನು ಎಂಬುದನ್ನು ಮನನ ಮಾಡಿಕೊಳ್ಳಬೇಕು. ಸಿದ್ದರಾಮಯ್ಯ ಏನೇನು ಮಾಡಿದ್ದರು ಎಂಬುದನ್ನು ಮಧ್ಯವರ್ತಿಗಳೇ ಬಹಿರಂಗಪಡಿಸಲು ಮುಂದಾಗಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಶನಿವಾರ ಪಕ್ಷದ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಆಗ ಕಾಂಗ್ರೆಸ್’ನ ದುರಾಡಳಿತ ಮತ್ತು ಅವ್ಯವಹಾರಗಳೆಲ್ಲವೂ ಹೊರಗೆ ಬರಲಿದೆ ಎಂದು ಹೇಳಿದರು.
