ಸಿದ್ದರಾಮಯ್ಯ ಕಡೆಗಣಿಸಿ ಸರ್ಕಾರ ಉಳಿಯುವುದೇ..?

Siddaramaiah is Not Side Lined In Karnataka Politics Says Narayana Rao
Highlights

ಸದ್ಯ ಕರ್ನಾಟಕದಲ್ಲಿ ರಚನೆಯಾಗಿರುವ ಮೈತ್ರಿ ಸರ್ಕಾರದ ಉಳಿವಿನ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ ಎನ್ನುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಅನೇಕ ರಾಜಕೀಯ ಬೆಳವಣಿಗೆಗಳು ಸಂಭವಿಸುತ್ತಿದೆ. ಇದೇ ವೇಳೆ ಸಿದ್ದರಾಮಯ್ಯ ಅವರನ್ನು ಕಡೆಗಣಿಸಿ ಸಮ್ಮಿಶ್ರ ಸರ್ಕಾರ ಉಳಿಯಲು ಸಾಧ್ಯವೇ ಎಂದು ಬಸವಕಲ್ಯಾಣ ಶಾಸಕ ನಾರಾಯಣ ರಾವ್ ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ. 

ಬೆಂಗಳೂರು :  ಸಿದ್ದರಾಮಯ್ಯ ಅವರನ್ನು ಕಡೆಗಣಿಸಿ ಸಮ್ಮಿಶ್ರ ಸರ್ಕಾರ ಉಳಿಯಲು ಸಾಧ್ಯವೇ ಎಂದು ಬಸವಕಲ್ಯಾಣ ಶಾಸಕ ನಾರಾಯಣ ರಾವ್ ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ. 

ಧರ್ಮಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರೊಬ್ಬ ಮಾಸ್ ಲೀಡರ್, ಅವರನ್ನು ಕಡೆಗಣಿಸುವುದೆಲ್ಲ ಮಾಧ್ಯಮ ಸೃಷ್ಟಿ ಎಂದು ಅಭಿಪ್ರಾಯಪಟ್ಟರು. 

ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಲು ಬಂದಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಅವರು ನಮ್ಮ ನಾಯಕರು, ಮಾಜಿ ಮುಖ್ಯಮಂತ್ರಿಗಳು, ಸಮನ್ವಯ ಸಮಿತಿ ಅಧ್ಯಕ್ಷರು. ಹೀಗಾಗಿ ಅವರನ್ನು ಭೇಟಿಯಾಗದೇ ಇನ್ಯಾರನ್ನು ನಾವು ಭೇಟಿಯಾಗಬೇಕು? ಎಂದರು.

loader