ಮನಸ್ಸು ಮಾಡಿದರೆ 2 ನಿಮಿಷದಲ್ಲೇ ಸರ್ಕಾರ ಪತನ

Siddaramaiah Is Strong Leader  In Karnataka Says MLA Narayan
Highlights

ಮನಸ್ಸು ಮಾಡಿದರೆ ಎರಡೇ ನಿಮಿಷದಲ್ಲಿ ಸರ್ಕಾರ ಉರುಳಿಸುವ ಸಾಮರ್ಥ್ಯ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆ ಎಂದು ಬಸವಕಲ್ಯಾಣದ ಶಾಸಕ ಬಿ.ನಾರಾಯಣ ಹೇಳಿದ್ದಾರೆ. 

ಬೀದರ್ :  ಮನಸ್ಸು ಮಾಡಿದರೆ ಎರಡೇ ನಿಮಿಷದಲ್ಲಿ ಸರ್ಕಾರ ಉರುಳಿಸುವ ಸಾಮರ್ಥ್ಯ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆ ಎಂದು ಬಸವಕಲ್ಯಾಣದ ಶಾಸಕ ಬಿ.ನಾರಾಯಣ ಹೇಳಿದ್ದಾರೆ. ಕಾಂಗ್ರೆಸ್‌ನಲ್ಲಿ ತೀವ್ರ ಬಂಡಾಯ ಎದ್ದಿರುವ ಸಂದರ್ಭದಲ್ಲಿ ನಾರಾಯಣ ಅವರು ನೀಡಿರುವ ಈ ಹೇಳಿಕೆ ತೀರ್ವ ಕುತೂಹಲ ಮೂಡಿಸಿದೆ.

ಸಿದ್ದರಾಮಯ್ಯರನ್ನು ಇತ್ತೀಚೆಗೆ ಕಾಂಗ್ರೆಸ್ ಕಡೆಗಣಿಸುತ್ತಿದೆಯೇ ಎಂದು ಬೀದರ್‌ನಲ್ಲಿ ಶನಿವಾರ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಾಸಕ ನಾರಾಯಣ,‘‘ಸಿದ್ದರಾಮಯ್ಯ ಅವರನ್ನು ಯಾರೂ ಕಡೆಗಣಿಸಲು ಸಾಧ್ಯವಿಲ್ಲ. 

ಸಿದ್ದರಾಮಯ್ಯ ಸಿದ್ದರಾಮಯ್ಯನೆ. ಅವರು ಮನಸ್ಸು ಮಾಡಿದರೆ ಎರಡು ನಿಮಿಷದಲ್ಲಿ ಸರ್ಕಾರ ಉರುಳುತ್ತದೆ. ಅವರಿಗೆ ಅಗೌರವ ತೋರುವ, ಶಕ್ತಿಗುಂದಿಸುವವರು ತಾವಾಗಿಯೇ ಮೂಲೆಗುಂಪಾಗುತ್ತಾರೆ. ಅವರ ಒಂದು ಕೂದಲಿಗೂ ಧಕ್ಕೆ ಆಗಲು ನಾವು ಬಿಡುವುದಿಲ್ಲ ’’ ಎಂದು ತಿಳಿಸಿದರು.

ಸಮ್ಮಿಶ್ರ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರೇ ಸಮನ್ವಯ ಸಮಿತಿ ಅಧ್ಯಕ್ಷರು. ಹೀಗಾಗಿ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಬರುವುದಿಲ್ಲ. ಐದು ವರ್ಷ ಈ  ಸರ್ಕಾರವನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲ. ನಾವೂ ಅಂಥ ಯಾವುದೇ ನೀಚ ಕೆಲಸ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಕಟ್ಟಾ ಬೆಂಬಲಿಗರಾಗಿರುವ ನಾರಾಯಣ್ ಇದೇ ವೇಳೆ ಸ್ಪಷ್ಟಪಡಿಸಿದರು. 

loader