ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಸಂಪುಟದಲ್ಲಿ ಮತ್ತೊಂದು ಹೊಸ ಆಫರ್ ನೀಡುವ ಸಾಧ್ಯತೆ ಇದೆ.
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವ ಸಾಧ್ಯತೆಯಿದೆ. ಈ ಬಗ್ಗೆ ಖುದ್ದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಸುಳಿವು ನೀಡಿದ್ದಾರೆ.
ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದು ತಿಳಿಸಿದರು. ಇದು ಸರ್ಕಾರದ ಹಂತದಲ್ಲಿ ಆಗ ಬೇಕಿರುವ ನಿರ್ಣಯ.
ಹೀಗಾಗಿ ಈ ಬಗ್ಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರು ಚರ್ಚೆ ಮಾಡಿ ಶೀಘ್ರದಲ್ಲಿಯೇ ಅಂತಿಮ ನಿರ್ಧಾರ ತೆಗೆದು ಕೊಳ್ಳಲಿದ್ದಾರೆ ಎಂದು ಹೇಳಿದರು.

Last Updated 25, Jun 2018, 11:57 AM IST