ಸಿಎಂ ಕುಮಾರಸ್ವಾಮಿಗೆ ಸಿದ್ದರಾಮಯ್ಯ ವಿರೋಧ

Siddaramaiah opposed To HD Kumaraswamys New Budget
Highlights

 ಕರ್ನಾಟಕದಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ನೂತನ ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿದ್ದು, ಆದರೆ ಹೊಸ ಬಜೆಟ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು : ಕರ್ನಾಟಕದಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ನೂತನ ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿದ್ದು, ಆದರೆ ಹೊಸ ಬಜೆಟ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬೇಕಿದ್ದರೆ ಪೂರಕ ಬಜೆಟ್ ಮಂಡಿಸಬಹುದು. ನಮ್ಮ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಬಜೆಟ್ ಮಂಡನೆ ಮಾಡಿದೆ. ಹೊಸ ಕಾರ್ಯಕ್ರಮ ಬೇಕೆಂದಿದ್ದರೆ ಪೂರಕ ಬಜೆಟ್ ಮಂಡಿಸಬೇಕು.  ಆದರೆ ಸಮ್ಮಿಶ್ರ ಸರ್ಕಾರದಿಂದ  ಹೊಸ ಬಜೆಟ್ ಮಂಡನೆ ಮಾಡುವಂತಹ ಅಗತ್ಯವಿಲ್ಲ ಎಂದು ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ.  

ಇನ್ನು ರಾಜ್ಯದಲ್ಲಿ ಹಿಂದೆ ಆಡಳಿತದಲ್ಲಿ  ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಎಲ್ಲ ಕಾರ್ಯಕ್ರಮಗಳೂ ಕೂಡ ಮುಂದುವರಿಯುತ್ತವೆ. ಈ ವಿಚಾರದಲ್ಲಿ ಯಾವುದೇ ಅನುಮಾನ ಬೇಡ ಎಂದು ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

loader