ಇಂಧನ ಸಚಿವ ಡಿ,ಕೆ.ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿರುವ ದಾಳಿಯನ್ನು ಅಪ್ರಜಾಸತ್ತಾತ್ಮಕ ಕ್ರಮವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಯಾರು ತಮ್ಮ ವಿರುದ್ಧ ಧ್ವನಿಯೆತ್ತುತ್ತಾರೋ ಅವರ ಮೇಲೆ ಇಂತಹ ದಾಳಿಗಳನ್ನು ನಡೆಸುವುದು ಬಿಜೆಪಿಯ ಚಾಳಿಯಾಗಿದೆ ಎಂದು ಹೇಳಿರುವ ಸಿದ್ದರಾಮಯ್ಯ ಇದು ಪ್ರಜಾತಂತ್ರದ ವಿರುದ್ಧವಾಗಿದೆ ಎಂದು ಕಿಡಿಕಾರಿದ್ದಾರೆ.
ಬೆಂಗಳೂರು: ಇಂಧನ ಸಚಿವ ಡಿ,ಕೆ.ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿರುವ ದಾಳಿಯನ್ನು ಅಪ್ರಜಾಸತ್ತಾತ್ಮಕ ಕ್ರಮವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಯಾರು ತಮ್ಮ ವಿರುದ್ಧ ಧ್ವನಿಯೆತ್ತುತ್ತಾರೋ ಅವರ ಮೇಲೆ ಇಂತಹ ದಾಳಿಗಳನ್ನು ನಡೆಸುವುದು ಬಿಜೆಪಿಯ ಚಾಳಿಯಾಗಿದೆ ಎಂದು ಹೇಳಿರುವ ಸಿದ್ದರಾಮಯ್ಯ ಇದು ಪ್ರಜಾತಂತ್ರದ ವಿರುದ್ಧವಾಗಿದೆ ಎಂದು ಕಿಡಿಕಾರಿದ್ದಾರೆ.
ಡಿ.ಕೆ. ಶಿವಕುಮಾರ್ ನಿವಾಸದ ಮೇಲಿನ ದಾಳಿ ವಿಚಾರವಾಗಿ ಇಂದು ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಕೇಂದ್ರೀಯ ಸಂಸ್ಥೆಗಳನ್ನು ಸರ್ಕಾರವು ದುರ್ಬಳಕೆ ಮಾಡುತ್ತಿದ್ದು ರಾಜಕೀಯ ಸೇಡು ತೀರಿಸುವ ಕೆಲಸ ಮಾಡುತ್ತಿದೆಯೆಂದು ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿವೆ.
