ಬೆಂಗಳೂರು[ಡಿ.27] ದೋಸ್ತಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಈ ಸಾರಿ ಸರಕಾರದ ವಿಚಾರ ಹೊರತುಪಡಿಸಿ ಕನ್ನಡದ ಬಗ್ಗೆ ಮಾತನ್ನಾಡಿದ್ದಾರೆ.

ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಪರೋಕ್ಷ ಭಿನ್ನಾಭಿಪ್ರಾಯ ಇದೀಗ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಮತ್ತೊಮ್ಮೆ ಬಹಿರಂಗವಾಗಿದೆ.

ರಾಜ್ಯ ಸರ್ಕಾರವನ್ನು ಆಡಿಸುತ್ತಿರುವ ನಿಜವಾದ ರಿಂಗ್ ಮಾಸ್ಟರ್ ಇವರೆ!

ಕನ್ನಡ ಮಾಧ್ಯಮ ವಿಚಾರ ಇಬ್ಬರ ನಡುವಿನ ಜಂಗಿ ಕುಸ್ತಿಗೆ ವೇದಿಕೆ ಕಲ್ಪಿಸಿದೆ. ರಾಜ್ಯದಲ್ಲಿ‌ ಮುಂದಿನ ಶೈಕ್ಷಣಿಕ ವರ್ಷದಿಂದ ಒಂದು ಸಾವಿರ ಇಂಗ್ಲೀಷ್ ಮಾಧ್ಯಮ ಶಾಲೆಗಳನ್ನು‌ ಪ್ರಾರಂಭಿಸುವುದಾಗಿ‌ ಮುಖ್ಯಮಂತ್ರಿ‌ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ  ಅವರೊಡನೆ ಚರ್ಚೆ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಅಲ್ಲದೇ   ಕನ್ನಡ ಭಾಷೆ ಕಲಿಕೆ ಮತ್ತು ಕನ್ನಡ ಮಾಧ್ಯಮದ ಬಗ್ಗೆ ನಮಗೆ ಸ್ಪಷ್ಟತೆ ಇರಬೇಕು.‌ನಾನು ಹೈಸ್ಕೂಲ್ ವರೆಗೆ ಕನ್ನಡ ಮಾಧ್ಯಮದಲ್ಲಿಯೇ ಕಲಿತವನು. ನಾನೇನು ಪೆದ್ದನಾ? ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿ ಉಳಿಯಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.