ಹುಬ್ಬಳ್ಳಿ: ‘ಖರ್ಗೆ ಸಿಎಂ ಆಗಬೇಕಿತ್ತು’ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೇಳಿದ ಸುದ್ದಿಗಾರರಿಗೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ ಖಾರವಾಗಿ ಉತ್ತರಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಗರಂ ಆಗಿ ಉತ್ತರಿಸಿದ ಅವರು, ‘ಖರ್ಗೆ ಸಿಎಂ’ ಎಂಬ ವಿಚಾರವನ್ನು ನಾನು ಹೇಳಿದ್ದೇನಾ ಅಥವಾ ಖರ್ಗೆ ಹೇಳಿದ್ದಾರಾ? ಕುಮಾರಸ್ವಾಮಿ ಹೇಳಿಕೆಗೆ ನಾನೇಕೆ ಪ್ರತಿಕ್ರಿಯೆ ನೀಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಪ್ರಶ್ನೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಮೈತ್ರಿ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ. ಕುಮಾರಸ್ವಾಮಿ ಹೇಳಿಕೆಗೆ ನಾನೇಕೆ ಪ್ರತಿಕ್ರಿಯಿಸಲಿ, ಇದು ನನ್ನ ಕೆಲಸವಲ್ಲ ಎಂದಷ್ಟೇ ಹೇಳಿದರು.