ಬೆಂಗಳೂರು [ಜು.22] :  ತಾವು ಮುಖ್ಯಮಂತ್ರಿ ಆಗಿದ್ದಾಗ ತಮ್ಮ ಬಳಿ ಕೆಲಸ ಮಾಡಿಸಿಕೊಂಡ ಶಾಸಕರೇ ಇದೀಗ ನನ್ನ ಬೆನ್ನಿಗೆ ಚೂರಿ ಹಾಕಿ ಹೋಗಿದ್ದಾರೆ ಎಂದು ಸಿದ್ದರಾಮಯ್ಯ ಸಭೆಯಲ್ಲಿ ನೋವು ತೋಡಿಕೊಂಡರು ಎಂದು ತಿಳಿದುಬಂದಿದೆ.

ತಮ್ಮ ಆಪ್ತರೇ ಹೋಗಿರುವುದರಿಂದ ನಾನೇ ಅವರನ್ನು ಕಳುಹಿಸಿದ್ದೇನೆ ಎಂದು ಅಪ ಪ್ರಚಾರ ಮಾಡಲಾಗುತ್ತಿದೆ. ಹೋದವರಷ್ಟೇ ಅಲ್ಲ, ಇಲ್ಲಿರುವವರೂ ತಮಗೆ ಆಪ್ತರು. ನಿಮ್ಮಲ್ಲಿ ಯಾರಿಗಾದರೂ ಬಿಜೆಪಿಗೆ ಹೋಗುವಂತೆ ಹೇಳಿದ್ದೇನೆಯೇ ಎಂದು ಪ್ರಶ್ನಿಸಿದ ಅವರು ಅಂತಹ ನೀಚ ಕೆಲಸ ನಾನು ಮಾಡುವುದಿಲ್ಲ. 

ತಮ್ಮ ಬಳಿ ಗಂಟೆಗಟ್ಟಲೇ ಕುಳಿತು ನಾವೆಲ್ಲೂ ಹೋಗುವುದಿಲ್ಲ ಎಂದವರು ಇದೀಗ ದೂರವಾಣಿ ಕರೆಯನ್ನೂ ಸ್ವೀಕರಿಸುತ್ತಿಲ್ಲ ಎಂದು ಬೈರತಿ ಬಸವರಾಜು, ಮುನಿರತ್ನ, ಎಸ್‌.ಟಿ. ಸೋಮೇಶೇಖರ್‌ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು ಎನ್ನಲಾಗಿದೆ.