ಸಿದ್ದು ಎಲ್ಲೇ ನಿಂತರೂ ಗೆಲ್ತಾರೆ: ಠಾಕೂರ್‌

First Published 6, Apr 2018, 8:39 AM IST
Siddaramaiah Win Election
Highlights

ಬಾದಾಮಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಬಗ್ಗೆ ತೀರ್ಮಾನಿಸುವುದು ಹೈಕಮಾಂಡ್‌ಗೆ ಬಿಟ್ಟನಿರ್ಧಾರ ಎಂದು ಎಐಸಿಸಿ ಕಾರ್ಯದರ್ಶಿ, ಬೆಳಗಾವಿ ಕಾಂಗ್ರೆಸ್‌ ಉಸ್ತುವಾರಿ ಮಾಣಿಕಂ ಠಾಕೂರ್‌ ಹೇಳಿದರು.

ಬಾಗಲಕೋಟೆ: ಬಾದಾಮಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಬಗ್ಗೆ ತೀರ್ಮಾನಿಸುವುದು ಹೈಕಮಾಂಡ್‌ಗೆ ಬಿಟ್ಟನಿರ್ಧಾರ ಎಂದು ಎಐಸಿಸಿ ಕಾರ್ಯದರ್ಶಿ, ಬೆಳಗಾವಿ ಕಾಂಗ್ರೆಸ್‌ ಉಸ್ತುವಾರಿ ಮಾಣಿಕಂ ಠಾಕೂರ್‌ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲೇ ಅತೀ ಹೆಚ್ಚು ಜನಪ್ರಿಯ ಸಿಎಂ ಎನಿಸಿಕೊಂಡಿದ್ದಾರೆ. ಅವರಿಗೆ ಇರುವ ಜನ ಬೆಂಬಲ ನೋಡಿದರೆ ಅವರು ಯಾವ ಕ್ಷೇತ್ರದಿಂದ ನಿಂತರೂ ಗೆಲ್ಲುವುದರಲ್ಲಿ ಎರಡು ಮಾತಿಲ್ಲ. ಆದರೆ, ಈ ಬಗ್ಗೆ ಹೈಕಮಾಂಡ್‌ ತೀರ್ಮಾನಿಸಲಿದೆ ಎಂದರು.

loader