ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುತ್ತಿರುವ ಮನೋಹರ್ ಪರ್ರಿಕರ್ ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ಪರಿಕ್ಕರ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ಸುದ್ದಿ ತಿಳಿದು ಬೇಸರವಾಯಿತು: ಸಿದ್ದರಾಮಯ್ಯ
ಬೆಂಗಳೂರು: ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುತ್ತಿರುವ ಮನೋಹರ್ ಪರ್ರಿಕರ್ ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದು, ಅವರು ಬೇಗ ಗುಣಮುಖರಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ.
ಗೋವಾ ಮುಖ್ಯಮಂತ್ರಿ ಶ್ರೀ ಮನೋಹರ್ ಪರಿಕ್ಕರ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ಸುದ್ದಿ ತಿಳಿದು ಬೇಸರವಾಯಿತು. ಅವರು ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸುತ್ತೇನೆ, ಎಂದು ಸಿದ್ದರಾಮಯ್ಯ ಟ್ವೀಟಿಸಿದ್ದಾರೆ.
ಪರ್ರಿಕರ್ ಚೇತರಿಸಿಕೊಳ್ಳುವವರೆಗೆ ಅವರ ಅನುಪಸ್ಥಿತಿಯಲ್ಲಿ ಆಡಳಿತ ನಡೆಸಲು ತ್ರಿಸದಸ್ಯ ಸಮಿತಿ ರಚಿಸಲಾಗಿದೆ. ಬಿಜೆಪಿಯ ಫ್ರಾನ್ಸಿಸ್ ಡಿಸೋಜಾ, ಎಂಜಿಪಿ ಪಕ್ಷದ ಸುದಿನ್ ಧವಲೀಕರ್ ಹಾಗೂ ಗೋವಾ ಫಾರ್ವರ್ಡ್’ನ ವಿಜಯ್ ಸರ್ದೇಸಾಯಿ ಈ ಸಮಿತಿಯಲ್ಲಿದ್ದಾರೆ.
ಮುಖ್ಯಮಂತ್ರಿ ಪರ್ರಿಕರ್ ಕೈಗಾರಿಕೆ, ಶಿಕ್ಷಣ, ಪರಿಸರ, ಹಣಕಾಸು ಮತ್ತು ಗೃಹ ಇಲಾಖೆಯನ್ನು ನೋಡಿಕೊಳ್ಳುತ್ತಿದ್ದಾರೆ. ಇವರ ಅನುಪಸ್ಥಿತಿಯಲ್ಲಿ ತುರ್ತು ಕೆಲಸವಿದ್ದರೆ ತ್ರಿಸದಸ್ಯ ಸಮಿತಿ ಇದನ್ನು ನಿಭಾಯಿಸಲಿದೆ.
