ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಪತ್ರಕರ್ತ ಚಕ್ರವರ್ತಿ ಚಂದ್ರಚೂಡ್ ವಿಚಾರಣೆಯನ್ನು ಎಸ್ಐಟಿ ಅಧಿಕಾರಿಗಳು ನಡೆಸಿದ್ದಾರೆ.
ಬೆಂಗಳೂರು (ಸೆ.28): ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಪತ್ರಕರ್ತ ಚಕ್ರವರ್ತಿ ಚಂದ್ರಚೂಡ್ ವಿಚಾರಣೆಯನ್ನು ಎಸ್ಐಟಿ ಅಧಿಕಾರಿಗಳು ನಡೆಸಿದ್ದಾರೆ.
ಇಂದ್ರಜಿತ್ ಲಂಕೇಶ್ ಆಪ್ತನಾಗಿರುವ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಗೌರಿ ಲಂಕೇಶ್ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಹೀಗಾಗಿ ಗೌರಿ ಲಂಕೇಶ್ ಅವರಿಗೆ ಚಕ್ರವರ್ತಿ ಚಂದ್ರಚೂಡ್ ಬೆದರಿಕೆ ಹಾಕಿದ್ದರಂತೆ. ಈ ಸಂಬಂಧ ನಿನ್ನೆ ದಿನವಿಡೀ ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಹಲವು ನಕಲಿ ಫೇಸ್ ಬುಕ್ ಖಾತೆ ಹೊಂದಿದ್ದ ಚಕ್ರವರ್ತಿ ಚಂದ್ರಚೂಡ್, ನಕಲಿ ಖಾತೆಗಳ ಮೂಲಕ ಗೌರಿ ಲಂಕೇಶ್ ಗೆ ಬೆದರಿಕೆ ಹಾಕಿದ್ದರು.
