ನಂಜನಗೂಡು, ಗುಂಡ್ಲುಪೇಟೆ ಉಪಸಮರದ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಕ್ಷೇತ್ರದಲ್ಲಿ ಗೆಲುವಿಗಾಗಿ ಬೆವರು ಹರಿಸುತ್ತಿದ್ದಾರೆ. ಇವತ್ತು ಬೈ ಎಲೆಕ್ಷನ್ ಅಖಾಡಕ್ಕೆ ಮಾಜಿ ಸಿಎಂ ಎಸ್ಎಂ ಕೃಷ್ಣ ಇಳಿಯುತ್ತಿದ್ದು, ಬಿಜೆಪಿಗೆ ಮತ್ತಷ್ಟು ಬಲ ಬರಲಿದೆ.
ಮೈಸೂರು(ಎ.03): ನಂಜನಗೂಡು, ಗುಂಡ್ಲುಪೇಟೆ ಉಪಸಮರದ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಕ್ಷೇತ್ರದಲ್ಲಿ ಗೆಲುವಿಗಾಗಿ ಬೆವರು ಹರಿಸುತ್ತಿದ್ದಾರೆ. ಇವತ್ತು ಬೈ ಎಲೆಕ್ಷನ್ ಅಖಾಡಕ್ಕೆ ಮಾಜಿ ಸಿಎಂ ಎಸ್ಎಂ ಕೃಷ್ಣ ಇಳಿಯುತ್ತಿದ್ದು, ಬಿಜೆಪಿಗೆ ಮತ್ತಷ್ಟು ಬಲ ಬರಲಿದೆ.
ಕಾಂಗ್ರೆಸ್'ನಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇಡೀ ಸರ್ಕಾರವೇ ಉಪಸಮರದ ಮತಬೇಟೆಯಲ್ಲಿ ಬ್ಯುಸಿಯಾಗಿದೆ. ಇತ್ತ ಬಿಜೆಪಿಯಿಂದ ರಾಜ್ಯಾಧ್ಯಕ್ಷ ಬಿಎಸ್ವೈ ಸೇರಿದಂತೆ ಘಟಾನುಘಟಿಗಳು ಕ್ಷೇತ್ರದಲ್ಲೇ ಜಾಂಡಾ ಹೊಡೆದಿದ್ದಾರೆ. ಇದರ ಮಧ್ಯೆ ಇವತ್ತು ಬಿಜೆಪಿ ಅಭ್ಯರ್ಥಿಗಳ ಪರ ಎಸ್.ಎಂ.ಕೃಷ್ಣ ಅಖಾಡಕ್ಕೆ ಇಳಿಯುತ್ತಿದ್ದಾರೆ. ಗುಂಡ್ಲುಪೇಟೆ ಮತ್ತು ನಂಜನಗೂಡು ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ.
ಇನ್ನೂ ಬಂಡೀಪುರ ರಸ್ತೆಯಲ್ಲಿರುವ ಅಂಬೇಡ್ಕರ್ ಭವನದ ಸಮೀಪ ಇಂದು ಬಿಜೆಪಿ ಸಮಾವೇಶ ನಡೆಯಲಿದೆ. ನಿನ್ನೆಯೇ ಬಿಜೆಪಿ ರಾಜ್ಯಧ್ಯಕ್ಷ ಬಿಎಸ್ವೈ ಇಲ್ಲಿನ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಇವತ್ತು ಎಸ್ ಎಂ ಕೃಷ್ಣ ಸೇರಿದಂತೆ ಬಿಜೆಪಿ ಘಟಾನುಘಟಿಗಳು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಮಧ್ಯೆ ಎಲೆಕ್ಷನ್'ಗೆ ನೇಮಿಸಿರುವ ರಾಜ್ಯ ಪೊಲೀಸರ ಮೇಲೆ ಕಾಂಗ್ರೆಸ್ ಸರ್ಕಾರ ಪ್ರಭಾವ ಬೀರುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಹೀಗಾಗಿ ಇಂದು ಕೇಂದ್ರ ತಪಾಸಣಾ ದಳ ನಂಜನಗೂಡು, ಗುಂಡ್ಲುಪೇಟೆಗೆ ಬಂದಿಳಿಯಲಿದೆ.
ವರದಿ: ಕಿರಣ್ ಹನಿಯಡ್ಕ, ಸುವರ್ಣನ್ಯೂಸ್.
