ಕೃಷ್ಣ ಅವರನ್ನು ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಪ್ರಾಥಮಿಕ ಸದಸ್ಯತ್ವ ನೀಡಿ ಬಿಜೆಪಿಗೆ ಸ್ವಾಗತಿಸಿದರು. ಕೇಂದ್ರ ಸಚಿವ ಸದಾನಂದಗೌಡ, ಸಂಸದ ಪ್ರಹ್ಲಾದ್​ ಜೋಶಿ, ಮುಖಂಡರಾದ ಆರ್. ಅಶೋಕ್,ಸಿಟಿ ರವಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ನವದೆಹಲಿ(ಮಾ.22): ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಕೃಷ್ಣ ಅವರನ್ನು ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಪ್ರಾಥಮಿಕ ಸದಸ್ಯತ್ವ ನೀಡಿ ಬಿಜೆಪಿಗೆ ಸ್ವಾಗತಿಸಿದರು. ಕೇಂದ್ರ ಸಚಿವ ಸದಾನಂದಗೌಡ, ಸಂಸದ ಪ್ರಹ್ಲಾದ್​ ಜೋಶಿ, ಮುಖಂಡರಾದ ಆರ್. ಅಶೋಕ್,ಸಿಟಿ ರವಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಸೇರ್ಪಡೆಗೊಂಡ ನಂತರ ಮಾತನಾಡಿದ ಕೃಷ್ಣ, ಪ್ರಧಾನಿ ಮೋದಿಯವರ ಜತೆ ಉತ್ತಮ ಸಂಬಂಧವಿದೆ ಹೀಗಾಗಿ ನಾನು ಬಿಜೆಪಿ ಸೇರುತ್ತಿದ್ದೇನೆ. ಅನಂತಕುಮಾರ್​ ಸೇರಿದಂತೆ ಹಲವರ ಜತೆ ಉತ್ತಮ ಬಾಂಧವ್ಯವಿದೆ. ಅಮಿತ್​ ಶಾ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ವಾಜಪೇಯಿ ಸಾಧನೆಯನ್ನು ಈ ಸಂದರ್ಭದಲ್ಲಿ ಸ್ಮರಿಸಿದರು. ಪ್ರಧಾನಿ ಮೋದಿ ಅವರು ಭಾರತವನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗಲಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್​ ಹೈಕಮಾಂಡ್ ಧೋರಣೆಯನ್ನು ಖಂಡಿಸಿ ಜನವರಿಯಲ್ಲಿ ಪಕ್ಷವನ್ನು ತೊರೆದಿದ್ದರು.