ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರೂ ಪಕ್ಷದ ಚಟುವಟಿಕೆಗಳಿಂದ ದೂರ ಇರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಇಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಪರಿವರ್ತನಾ ಯಾತ್ರೆಗೆ ಗೈರಾಗಲಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರೂ ಪಕ್ಷದ ಚಟುವಟಿಕೆಗಳಿಂದ ದೂರ ಇರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಇಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಪರಿವರ್ತನಾ ಯಾತ್ರೆಗೆ ಗೈರಾಗಲಿದ್ದಾರೆ.

ಸದಾಶಿವನಗರದಲ್ಲಿನ ಎಸ್. ಎಂ. ಕೃಷ್ಣ ನಿವಾಸಕ್ಕೆ ಶನಿವಾರ ಸಂಜೆ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಭೇಟಿ ನೀಡಿದರು. ನಗರದಲ್ಲಿ ನಡೆಯುವ ಪರಿವರ್ತನಾ ರ್ಯಾಲಿಗೆ ಆಗಮಿಸುವಂತೆ ಆಹ್ವಾನಿಸಿದರು. ಆದರೆ, ಅವರು ಸಮಾವೇಶದಲ್ಲಿ ಭಾಗವಹಿಸಲು ನಿರಾಕರಿಸಿದರು.

ಅನಾರೋಗ್ಯ ಮತ್ತು ವಿದೇಶ ಪ್ರಯಾಣ ನೆಪಹೇಳಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದು ಕೃಷ್ಣ ಸ್ಪಷ್ಟಪಡಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಜ.28ರಂದು ಪರಿವರ್ತನಾ ರ್ಯಾಲಿಯ ಸಮಾರೋಪ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ. ಬಿಜೆಪಿ ಸೇರ್ಪಡೆ ಬಳಿಕ ಕೇವಲ ನಾಲ್ಕು ಬಾರಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಹೊರತುಪಡಿಸಿದರೆ ಬಹುತೇಕ ಪಕ್ಷದ ಚಟುವಟಿಕೆಯಿಂದ ಎಸ್.ಎಂ. ಕೃಷ್ಣ ಅವರು ಅಂತರ ಕಾಯ್ದುಕೊಂಡಿದ್ದಾರೆ.