ಬಿಜೆಪಿಯಲ್ಲಿ ಕಡೆಗಣಿಸಲ್ಪಟ್ಟರಾ ಎಸ್.ಎಂ ಕೃಷ್ಣ..?

SM Krishna Silent In BJP Politics
Highlights

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಹಿರಿಯ ನಾಯಕ ಎಸ್.ಎಂ ಕೃಷ್ಣ ಅವರು ಇದೀಗ ಮೌನಕ್ಕೆ ಶರಣಾಗಿದ್ದಾರೆ. ಇದರಿಂದ ಬಿಜೆಪಿಯಲ್ಲಿ ಮಾಜಿ ಸಿಎಂ ಅವರನ್ನು ಕಡೆಗಣನೆ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆಯೂ ಕೂಡ ಮೂಡಿದೆ.

ಬೆಂಗಳೂರು : ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಹಿರಿಯ ನಾಯಕ ಎಸ್.ಎಂ ಕೃಷ್ಣ ಅವರು ಇದೀಗ ಮೌನಕ್ಕೆ ಶರಣಾಗಿದ್ದಾರೆ. ಇದರಿಂದ ಬಿಜೆಪಿಯಲ್ಲಿ ಮಾಜಿ ಸಿಎಂ ಅವರನ್ನು ಕಡೆಗಣನೆ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆಯೂ ಕೂಡ ಮೂಡಿದೆ.

ಈ ನಿಟ್ಟಿನಲ್ಲಿ  ತಮ್ಮವರಿಗೆ ಸೂಕ್ತ ಸ್ಥಾನ ಮಾನ ನೀಡಲು ಕೃಷ್ಣ ಅವರಿಗೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಮತ್ತೆ ಕಾಂಗ್ರೆಸ್’ಗೆ ತೆರಳುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ಇನ್ನು ಹಳೇ ಮೈಸೂರು ಭಾಗದಲ್ಲಿ ಟಿಕೆಟ್ ಫೈನಲ್ ಮಾಡುವಾಗಲೂ ಕೂಡ ಎಸ್.ಎಂ ಕೃಷ್ಣ ಅವರನ್ನು ಬಿಜೆಪಿಯಲ್ಲಿ ಪರಿಗಣನೆಗೆ ತೆಗೆದುಕೊಳ್ಳಲಿಲ್ಲ.

 ಎಲ್ಲಾ ಕಾರಣಗಳಿಂದ ಬಿಜೆಪಿ ನಾಯಕರ ನಡೆಯಿಂದ ಅವರು ಪಕ್ಷವನ್ನು ಬಿಡುತ್ತಾರಾ ಎನ್ನುವ ಪ್ರಶ್ನೆ ಮೂಡಿದ್ದು, ಯಲಹಂಕ ರೆಸಾರ್ಟ್’ನಲ್ಲಿ ಎಸ್.ಎಂ ಕೃಷ್ಣ ಅವರ ಆಪ್ತರು ಸಭೆ ನಡೆಸಿದ್ದಾರೆ. ಇದೇ ವೇಳೆ ಅವರ ಆಪ್ತರು ಟಿಕೆಟ್ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಬಿಜೆಪಿಯಲ್ಲಿದ್ದು ಏನು ಮಾಡಬೇಕು ಯೋಚಿಸಿ ಎಂದು ಕೃಷ್ಣ ಅವರಿಗೆ ಅವರ ಆಪ್ತರು ಹೇಳಿದ್ದಾರೆ ಎನ್ನಲಾಗಿದೆ.

loader