ಬಿಜೆಪಿ ಸೇರ್ಪಡೆ ಬಳಿಕ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಬೈಎಲೆಕ್ಷನ್ ಪ್ರಚಾರದ ಅಖಾಡಕ್ಕಿಳಿದಿದ್ದಾರೆ. ಬೆಂಗಳೂರಿನಿಂದ ನಂಜನಗೂಡಿಗೆ ಬಂದಿಳಿದ ಎಸ್.ಎಂ ಕೃಷ್ಣ, ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ, ನಾನು ಹಲವು ಸಿಎಂಗಳ ಕಂಡಿದ್ದೇನೆ, ಆದರೆ ಈ ಸರ್ಕಾರ ನಾ ಕಂಡ ಅತ್ಯಂತ ಕೆಟ್ಟ ಸರ್ಕಾರ ಅಂತ ಸಿಎಂ ಸಿದ್ದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರು(ಎ.04): ಬಿಜೆಪಿ ಸೇರ್ಪಡೆ ಬಳಿಕ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಬೈಎಲೆಕ್ಷನ್ ಪ್ರಚಾರದ ಅಖಾಡಕ್ಕಿಳಿದಿದ್ದಾರೆ. ಬೆಂಗಳೂರಿನಿಂದ ನಂಜನಗೂಡಿಗೆ ಬಂದಿಳಿದ ಎಸ್.ಎಂ ಕೃಷ್ಣ, ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ, ನಾನು ಹಲವು ಸಿಎಂಗಳ ಕಂಡಿದ್ದೇನೆ, ಆದರೆ ಈ ಸರ್ಕಾರ ನಾ ಕಂಡ ಅತ್ಯಂತ ಕೆಟ್ಟ ಸರ್ಕಾರ ಅಂತ ಸಿಎಂ ಸಿದ್ದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅಲ್ಲಿಂದ ನೇರವಾಗಿ ಗುಂಡ್ಲುಪೇಟೆಯ ಬಿಜೆಪಿ ಸಮಾವೇಶಕ್ಕೆ ಕೃಷ್ಣ ಹಾಗೂ ಶ್ರೀನಿವಾಸ ಪ್ರಸಾದ್ ಒಗ್ಗೂಡಿ ಬಂದರು. ಇಲ್ಲಿ ಸಿದ್ದರಾಮಯ್ಯನವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಶ್ರೀನಿವಾಸ ಪ್ರಸಾದ್, ಸಿದ್ದರಾಮಯ್ಯಗೆ ಅಧಿಕಾರದ ಅಮಲೇರಿದೆ, ಅದನ್ನ ಜನರೇ ಇಳಿಸಬೇಕು ಅಂದ್ರು.
ಇನ್ನೂ ಸಿಎಂ ಸಿದ್ದರಾಮಯ್ಯ ಇವತ್ತು ಗುಂಡ್ಲುಪೇಟೆ ಕ್ಷೇತ್ರದ ಸುಮಾರು 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ರೋಡ್ ಶೋ ನಡೆಸಿ ಅಭ್ಯರ್ಥಿ ಗೀತಾ ಮಹದೇವಪ್ರಸಾದ್ ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು. ಈ ವೇಳೆ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದ್ರು.
ಒಟ್ಟಿನಲ್ಲಿ ಚುನಾವಣೆ ಹತ್ತಿರವಾಗ್ತಿದಂತೆ ಪ್ರಚಾರದ ಭರಾಟೆ ಕೂಡ ಜೋರಾಗಿದೆ.
