ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ  ಕೇಂದ್ರ ಸಚಿವ  ಅನಂತ್ ಕುಮಾರ್ ಅವರು  ಬೆಂಗಳೂರಿನ ಶಂಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು, [ಅ.28]: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಅವರನ್ನು ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಅನಂತ್ ಕುಮಾರ್ ಅವರು ಬೆಂಗಳೂರಿನ ಶಂಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಇತ್ತೀಚೆಗಷ್ಟೇ ಅನಂತ್ ಕುಮಾರ್ ಅವರು ಲಂಡನ್ ನಲ್ಲಿ ಚಿಕಿತ್ಸೆ ಪಡೆದು ಭಾರತಕ್ಕೆ ಮರಳಿದ್ದರು.