ರಾಜ್ಯ ನಾಯಕರ ನಡವಳಿಕೆಯಿಂದ ಅಸಮಾಧಾನಗೊಂಡು ರಾಜೀನಾಮೆ ಸಲ್ಲಿಸಿದ್ದಾರೆ.

ಬೆಂಗಳೂರು(ಜ.28): ಕಾಂಗ್ರೆಸ್'ನ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ, ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಕಾಂಗ್ರೆಸ್'ಗೆ ರಾಜೀನಾಮೆ ನೀಡಿದ್ದಾರೆ. ರಾಜ್ಯ ನಾಯಕರ ನಡವಳಿಕೆಯಿಂದ ಅಸಮಾಧಾನಗೊಂಡು ರಾಜೀನಾಮೆ ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಮತ್ತಿತ್ತರ ಮುಖಂಡರ ನಡವಳಿಗೆಯ ವಿರುದ್ಧ ಎಸ್'ಎಂ'ಕೆ ಅಸಮಧಾನಗೊಂಡಿದ್ದರು. ಇಂದು ಬೆಳಿಗ್ಗೆ 11 ಗಂಟೆಗೆ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

2 ದಿಗಗಳ ಹಿಂದಷ್ಟೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದ ಅವರು ರಾಜ್ಯ ಕಾಂಗ್ರೆಸ್​ನಲ್ಲಾಗುತ್ತಿರುವ ಬೆಳವಣಿಗೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಸಂಬಂಧ ನಾಳೆ ಬೆಳಿಗ್ಗೆ 11 ಗಂಟೆಗೆ ತುರ್ತು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಕರ್ನಾಟಕದಲ್ಲಿ 1999 ರಿಂದ 2004 ರವರೆಗೆ ಕಾಂಗ್ರೆಸ್'ನಿಂದ ಮುಖ್ಯಮಂತ್ರಿಯಾಗಿದ್ದ ಅವರು ತದ ನಂತರ ಮಹಾರಾಷ್ಟ್ರದ ರಾಜ್ಯಪಾಲ ಹಾಗೂ ಯುಪಿಎ ಆಡಳಿತದಲ್ಲಿ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.