ನವದೆಹಲಿ (ಅ.01): ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ತಮ್ಮ ಶೈಕ್ಷಣಿಕ ಅರ್ಹತೆ ಬಗ್ಗೆ ನಕಲಿ ದಾಖಲೆ ನೀಡಿದ್ದಾರೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಪ್ರಕರಣವನ್ನು ಪಟಿಯಾಲಾ ಹೌಸ್ ನ್ಯಾಯಾಲಯ ಅ.6 ರಂದು ವಿಚಾರಣೆ ನಡೆಸಲಿದೆ.
ಚುನಾವಣೆಗೆ ಸ್ಪರ್ಧಿಸುವ ವೇಳೆ ಸ್ಮೃತಿ ಇರಾನಿ ತಮ್ಮ ಶೈಕ್ಷಣಿಕ ಅರ್ಹತೆಯ ಅಫಿಡವಿಟ್ಟನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದರು.
ಸ್ಮೃತಿ ಇರಾನಿ ಚುನಾವಣಾ ಆಯೋಗಕ್ಕೆ ನಕಲಿ ದಾಖಲೆಯನ್ನು ನೀಡಿದ್ದಾರೆ ಎಂದು ಪತ್ರಕರ್ತ ಅಹ್ಮದ್ ಖಾನ್ ಇವರ ಮೇಲೆ ಪ್ರಕರಣ ದಾಖಲಿಸಿದ್ದರು.
