ಶ್ರೀನಗರ(ನ.06): ಪಾಕ್ ಪಡೆಗಳು ಕ್ರಿಷ್ಣ ಘಾಟಿ ಸೆಕ್ಟರ್'ನಲ್ಲಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.

ಇಂದು ಮುಂಜಾನೆ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಕ್ರಿಷ್ಣ ಘಾಟಿ ಸೆಕ್ಟರ್'ನಲ್ಲಿ ಪಾಕಿಸ್ತಾನಿ ಪಡೆಗಳು ಅಪ್ರಚೋದಿತ ಶೆಲ್ ದಾಳಿ ನಡೆಸಿವೆ. ಇದಕ್ಕೆ ಭಾರತೀಯ ಪಡೆಗಳು ತಕ್ಕ ಪ್ರತ್ಯುತ್ತರ ನೀಡಿವೆ. ಗಡಿಯಲ್ಲಿ ಇನ್ನೂ ಗುಂಡಿನ ಚಕಮಕಿ ಮುಂದುವರೆದಿದೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಎರಡು ವಾರಗಳಲ್ಲಿ ಪಾಕ್ ಪಡೆಗಳು ಗಡಿನಿಯಂತ್ರಣ ರೇಖೆಯನ್ನು ಉಲ್ಲಂಘಿಸಿ ಎಂಟು ಯೋಧರನ್ನು ಹತ್ಯೆ ಮಾಡಿದ್ದಾರೆ.

ಭಾರತ ಸರ್ಜಿಕಲ್ ದಾಳಿ ನಡೆಸಿದ ನಂತರ ಇಲ್ಲಿಯವರೆಗೆ ಪಾಕಿಸ್ತಾನ 60ಕ್ಕೂ ಹೆಚ್ಚು ಬಾರಿ ಗಡಿ ನಿಯಂತ್ರಣ ರೇಖೆಯ ನಿಯಮವನ್ನು ಉಲ್ಲಂಘಿಸಿದೆ.