ಮೋದಿ ಅವರನ್ನು ಮುಂದಿನ ಅವಧಿಗೂ ಪ್ರಧಾನಿಯಾಗಿಸಬೇಕೆಂಬ ಬಿಜೆಪಿ ಯೋಜನೆಗೆ ಎನ್‌ಡಿಎ ಮೈತ್ರಿಕೂಟದ ಕೆಲವು ಪಕ್ಷಗಳೇ ಅಪಸ್ವರ ಎತ್ತಿವೆ ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ.

ಪಟನಾ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲೇ ಭಾರೀ ಬಹುಮತದೊಂದಿಗೆ ಮರಳಿ ಅಧಿಕಾರ ಪಡೆಯಲು ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆದರೆ, ಮೋದಿ ಅವರನ್ನು ಮುಂದಿನ ಅವಧಿಗೂ ಪ್ರಧಾನಿಯಾಗಿಸಬೇಕೆಂಬ ಬಿಜೆಪಿ ಯೋಜನೆಗೆ ಎನ್‌ಡಿಎ ಮೈತ್ರಿಕೂಟದ ಕೆಲವು ಪಕ್ಷಗಳೇ ಅಪಸ್ವರ ಎತ್ತಿವೆ ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ.

ಈ ಬಗ್ಗೆ ಶುಕ್ರವಾರ ಮಾತನಾಡಿದ ಕೇಂದ್ರ ಸಚಿವ ಹಾಗೂ ರಾಷ್ಟ್ರೀಯ ಲೋಕ ಸಮತಾ ಪಕ್ಷ(ಆರ್‌ಎಲ್‌ಎಸ್‌ಪಿ)ದ ನಾಯಕ ಉಪೇಂದ್ರ ಕುಶ್ವಾಹಾ, ‘ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯಾಗಿ ನೋಡಲು ಎನ್‌ಡಿಎ ಮೈತ್ರಿಕೂಟದ ಕೆಲವು ಮಂದಿಗೆ ಇಷ್ಟವಿಲ್ಲ. 

ಆದರೆ ಅವರಾರೆಂದು ನಾನು ಹೇಳಲ್ಲ’ ಎಂದು ಆರೋಪಿಸಿದ್ದಾರೆ. ಅಲ್ಲದೆ, ಇದನ್ನು ನಾನು ಸುಖಾ-ಸುಮ್ಮನೇ ಹೇಳುತ್ತಿಲ್ಲ. ಆದಾಗ್ಯೂ, ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ಹೆಚ್ಚು ಮತಗಳ ಕ್ರೋಡೀಕರಣಕ್ಕೆ ನೆರವಾಗುತ್ತೇನೆ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ.