ಮಡಿಕೇರಿ(ಸೆ.14): ತುರುವೇ ಕೆರೆ ಶಾಸಕ ಎಂ.ಟಿ ಕೃಷ್ಣಪ್ಪ ಪುತ್ರ ರಾಜೀವ್ ವಿರುದ್ಧ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ ಕೇಳಿ ಬಂದಿದೆ. ರಾಜೀವ್ ಮತ್ತು ಆತನ ಸ್ನೇಹತರನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ.

ಕೊಡಗಿನ ಸೋಮವಾರ ಪೇಟೆ ತಾಲೂಕಿನ ಚಿಕ್ಕಬೆಟಗೇರಿ ಗ್ರಾಮದಲ್ಲಿರುವ ಕೂರ್ಗ ರಿವರ್ ವ್ಯೂ ಹೆಸರಿನ ಅಕ್ರಮ ಹೋಂ ಸ್ಟೇ ಮೇಲೆ ದಾಳಿ ನಡೆಸಿದ ಪೊಲೀಸರು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ. ಇದರ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿ, ರಾಜೀವ್, ಮಧು, ಪ್ರಮೋದ್, ಪ್ರಸನ್ನ ಎಂಬವರನ್ನು ಬಂಧಿಸಿದ್ದಾರೆ. ಬಂಧಿತರಿಂದ 34 ಸಾವಿರ ನಗದು, ಒಂದು ಮಾರುತಿ ಕಾರುನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.