ಸೋನಿಯಾ ಗಾಂಧಿ ಟೆಲಿಫೋನ್ ಮೂಲಕ ರಾಷ್ಟ್ರಪತಿ ಚುನಾವಣೆ ಬಗ್ಗೆ ಗೌಡರೊಂದಿಗೆ ಮಾತನಾಡಿದ್ದಾರೆ. ಇದಕ್ಕೆ ಪ್ರತಿಕ್ರಯಿಸಿರುವ ದೇವೇಗೌಡರು ರಾಜ್ಯ ರಾಜಕಾರಣ ಬಿಟ್ಟು ಮತ್ತೆ ದೆಹಲಿಗೆ ತೆರಳುವುದು ಕಷ್ಟ ಎಂಬ ಅಭಿಪ್ರಾಯ ತಿಳಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ದೇವೇಗೌಡರ ಜೊತೆ ಚರ್ಚೆ ನಡೆಸಿದ್ದಾರೆ.
ಸೋನಿಯಾ ಗಾಂಧಿ ಟೆಲಿಫೋನ್ ಮೂಲಕ ರಾಷ್ಟ್ರಪತಿ ಚುನಾವಣೆ ಬಗ್ಗೆ ಗೌಡರೊಂದಿಗೆ ಮಾತನಾಡಿದ್ದಾರೆ. ಇದಕ್ಕೆ ಪ್ರತಿಕ್ರಯಿಸಿರುವ ದೇವೇಗೌಡರು ರಾಜ್ಯ ರಾಜಕಾರಣ ಬಿಟ್ಟು ಮತ್ತೆ ದೆಹಲಿಗೆ ತೆರಳುವುದು ಕಷ್ಟ ಎಂಬ ಅಭಿಪ್ರಾಯ ತಿಳಿಸಿದ್ದಾರೆ ಎನ್ನಲಾಗಿದೆ.
ಹೊಳೆನರಸೀಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ದೇವೇಗೌಡರು, ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧೆ ವಿಚಾರವಾಗಿ ಮೂರ್ನಾಲ್ಕು ಪಕ್ಷದವರು ಸಂಪರ್ಕಿಸಿದ್ದಾರೆ, ಆದರೆ ನಾನು ರಾಜ್ಯದಲ್ಲಿ ಪ್ರಾದೇಶಿಕ ಪಕ್ಷದ ಉಳಿವಿಗಾಗಿ ಹೋರಾಟ ನಡೆಸುತ್ತೇನೆ ಎಂದಿದ್ದಾರೆ.
ಅವಕಾಶ ಸಿಕ್ಕಿದರೆ ಎಲ್ಲರೂ ಪ್ರಭಾವಿಗಳಾಗುತ್ತಾರೆ, ಆದರೆ ನನಗೆ ರಾಷ್ಟ್ರಪತಿ ಸ್ಥಾನದಲ್ಲಿ ಆಸಕ್ತಿಯಿಲ್ಲ, ನಾನು ಜನರ ಮಧ್ಯೆಯೇ ಇರುತ್ತೇನೆ, ಜನರ ಮಧ್ಯೆಯೇ ಅಸುನೀಗುತ್ತೇನೆ ಎಂದು ದೇವೇಗೌಡರು ಹೇಳಿದ್ದಾರೆ.