ಅನಾರೋಗ್ಯ ಕಾರಣದಿಂದ ಸೋನಿಯಾ ಗಾಂಧಿ ರಾಜಕೀಯ ನಿವೃತ್ತಿ ಘೋಷಿಸಲಿದ್ದಾರೆ. ನಾಳೆ ಅಧಿಕೃತ ಘೋಷಣೆ ಹೊರ ಬೀಳಲಿದೆ.

ನವದೆಹಲಿ (ಡಿ.15): ಅನಾರೋಗ್ಯ ಕಾರಣದಿಂದ ಸೋನಿಯಾ ಗಾಂಧಿ ರಾಜಕೀಯ ನಿವೃತ್ತಿ ಘೋಷಿಸಲಿದ್ದಾರೆ. ನಾಳೆ ಅಧಿಕೃತ ಘೋಷಣೆ ಹೊರ ಬೀಳಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಹಿನ್ನಲೆಯಲ್ಲಿ ಸೋನಿಯಾ ಗಾಂಧಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಸೋನಿಯಾ ಗಾಂಧಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಈ ಬಾರಿ ಗುಜರಾತ್ ಚುನಾವಣಾ ರ್ಯಾಲಿಯಲ್ಲೂ ಕೂಡಾ ಕಾಣಿಸಿಕೊಂಡಿರಲಿಲ್ಲ. ಅನಾರೋಗ್ಯ ನಿಮಿತ್ತ ಅಮೇರಿಕಾಗೆ ಹೋಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ನಾನು ಪಕ್ಷದ ದೈನಂದಿನ ಕಾರ್ಯಗಳಲ್ಲಿ ಭಾಗವಹಿಸಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಸದ್ಯದಲ್ಲೇ ಅಧಿಕೃತ ಘೋಷಣೆ ಹೊರಬೀಳಲಿದೆ.