ಡಿ. ಕೆ ಶಿವಕುಮಾರ್ ಬಂಧನ| ಡಿ.ಕೆ. ಸುರೇಶ್‌ಗೆ ಫೋನ್‌ ಮಾಡಿ ಧೈರ್ಯ ತುಂಬಿದ ಸೋನಿಯಾ| 

ನವದೆಹಲಿ[ಸೆ.06]: ಡಿ.ಕೆ.ಶಿವಕುಮಾರ್‌ ಅವರನ್ನು ರಾಜಕೀಯ ಷಡ್ಯಂತ್ರದಲ್ಲಿ ಸಿಲುಕಿಸಲಾಗಿದೆ. ಈ ಸಂದರ್ಭದಲ್ಲಿ ಅವರ ಜೊತೆ ನಾವು, ಇಡೀ ಪಕ್ಷ ನಿಲ್ಲಲಿದೆ ಎಂದು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರು ಸಂಸದ ಡಿ.ಕೆ ಸುರೇಶ್‌ ಅವರಿಗೆ ದೂರವಾಣಿ ಕರೆ ಮಾಡಿ ಧೈರ್ಯ ತುಂಬಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗುರುವಾರ ಸಂಸದ ಡಿ.ಕೆ.ಶಿವಕುಮಾರ್‌ ಅವರ ಸಹೋದರರೂ ಆಗಿರುವ ಸಂಸದ ಡಿ.ಕೆ.ಸುರೇಶ್‌ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರ ಆರೋಗ್ಯ, ಮಾನಸಿಕ ಸ್ಥಿತಿಗತಿ ಕುರಿತು ಮಾಹಿತಿ ಪಡೆದಿದ್ದಾರೆ.

ED ಕುಣಿಕೆಯಲ್ಲಿ ಡಿಕೆಶಿ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸುಮಾರು ಮೂರು ನಿಮಿಷಗಳ ಕಾಲ ಮಾತನಾಡಿದ ಸೋನಿಯಾ ಅವರು ‘ವಿರೋಧ ಪಕ್ಷಗಳ ನಾಯಕರನ್ನು ಮಟ್ಟಹಾಕಲು ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ಹೀಗಾಗಿ ಡಿ.ಕೆ. ಶಿವಕುಮಾರ್‌ ಅವರು ಧೈರ್ಯ ಕಳೆದುಕೊಳ್ಳುವುದು ಬೇಡ. ಈ ಸಮಯದಲ್ಲಿ ನಾವೆಲ್ಲರೂ ಅವರ ಜತೆ ಇದ್ದೇವೆ’ ಎಂದು ಧೈರ್ಯ ತುಂಬಿದ್ದಾರೆ. ಈ ವಿಚಾರವನ್ನು ಸ್ವತಃ ಡಿ.ಕೆ.ಸುರೇಶ್‌ ಅವರೇ ತಿಳಿಸಿದ್ದಾರೆ.