ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಉಮರ್ ಅಬ್ದುಲ್ಲಾರನ್ನು ಇಂದು ಭೇಟಿ ಮಾಡಿ ಮುಂಬರಲಿರುವ ರಾಷ್ಟ್ರಪತಿ ಚುನಾವಣೆ ಬಗ್ಗೆ ಚರ್ಚೆ ನಡೆಸಿದರು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ವಾನುಮತದಿಂದ ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತಯಾರಿ ನಡೆಸುತ್ತಿದ್ದಾರೆ.

 ನವದೆಹಲಿ (ಮೇ.03): ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಉಮರ್ ಅಬ್ದುಲ್ಲಾರನ್ನು ಇಂದು ಭೇಟಿ ಮಾಡಿ ಮುಂಬರಲಿರುವ ರಾಷ್ಟ್ರಪತಿ ಚುನಾವಣೆ ಬಗ್ಗೆ ಚರ್ಚೆ ನಡೆಸಿದರು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ವಾನುಮತದಿಂದ ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತಯಾರಿ ನಡೆಸುತ್ತಿದ್ದಾರೆ.

ಅದೇ ರೀತಿ ಸೋನಿಯಾ ಗಾಂಧಿ ನಿತೀಶ್ ಕುಮಾರ್, ಶರದ್ ಯಾದವ್, ಶರದ್ ಪವಾರ್ ಹಾಗೂ ಎಡಪಂಥೀಯ ನನಾ

ಸೀತಾರಾಮ್ ಯೆಚೂರಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಎಸ್ಪಿ ಮುಖ್ಯಸ್ಥ ಮುಲಯಾಂ ಸಿಂಗ್ ಜೊತೆ ಟೆಲಿಫೊನ್ ಮಾತುಕತೆ ನಡೆಸಿದ್ದಾರೆ.

ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಗೆಲುವನ್ನು ಪಡೆದ ನಂತರ ಈ ಬಾರಿ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎಗೆ ಪ್ರಬಲ ಪೈಪೋಟಿ ನೀಡಲು ಪ್ರತಿಪಕ್ಷಗಳು ಒಟ್ಟಾಗುತ್ತಿವೆ. ಸರ್ವಾನುಮತದಿಂದ ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಜ್ಜಾಗಿದೆ.

ಜುಲೈ ತಿಂಗಳಿನಲ್ಲಿ ಪ್ರಣಬ್ ಮುಖರ್ಜಿಯವರ ಅವಧಿ ಮುಗಿಯಲಿದ್ದು ಜುಲೈ ಅಂತ್ಯದೊಳಗೆ ರಾಷ್ಟ್ರಪತಿ ಚುನಾವಣೆ ನಡೆಯುವ ಸಾಧ್ಯತೆಯಿದೆ.