ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿ ಆಯ್ಕೆ ಸಂಬಂಧ ವಿಪಕ್ಷಗಳ 10 ಸದಸ್ಯರ ಸಮಿತಿ ಬುಧವಾರ ಮೊದಲ ಸಭೆ ನಡೆಸಲಿದೆ. ಸಭೆಯಲ್ಲಿ ಕಾಂಗ್ರೆಸ್‌ ಮುಖಂಡರಾದ ಗುಲಾಮ್‌ ನಬಿ ಆಜಾದ್‌ ಮತ್ತು ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಮುಖಂಡರು ಉಪಸ್ಥಿತರಿರಲಿದ್ದಾರೆ.

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿ ಆಯ್ಕೆ ಸಂಬಂಧ ವಿಪಕ್ಷಗಳ 10 ಸದಸ್ಯರ ಸಮಿತಿ ಬುಧವಾರ ಮೊದಲ ಸಭೆ ನಡೆಸಲಿದೆ.

ಸಭೆಯಲ್ಲಿ ಕಾಂಗ್ರೆಸ್‌ ಮುಖಂಡರಾದ ಗುಲಾಮ್‌ ನಬಿ ಆಜಾದ್‌ ಮತ್ತು ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಮುಖಂಡರು ಉಪಸ್ಥಿತರಿರಲಿದ್ದಾರೆ.

ಇದೇ ವೇಳೆ, ರಾಷ್ಟ್ರಪತಿ ಅಭ್ಯರ್ಥಿಯ ಆಯ್ಕೆ ಸಂಬಂಧ ಬಿಜೆಪಿ ಮುಖಂಡರಾದ ರಾಜನಾಥ್‌ ಸಿಂಗ್‌, ಜೇಟ್ಲಿ ಮತ್ತು ವೆಂಕಯ್ಯ ನಾಯ್ಡು ಅವರು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾರನ್ನು ಈ ವಾರ ಭೇಟಿ ಮಾಡಲಿದ್ದಾರೆ.

ಒಮ್ಮತದ ಅಭ್ಯರ್ಥಿಯ ಆಯ್ಕೆ ಸಂಬಂಧ ವಿಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯುವ ಮೊದಲ ಯತ್ನ ಇದಾಗಿದೆ.