ಶೀಘ್ರ ಬರಪೀಡಿತ ಜಿಲ್ಲೆಗಳ ಘೋಷಣೆ : ದೇಶಪಾಂಡೆ

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 23, Aug 2018, 9:40 AM IST
Soon Announce Drought Hit District List Says RV Deshpande
Highlights

ಶೀಘ್ರದಲ್ಲೇ ರಾಜ್ಯದ ಬರ ಪೀಡಿತ ಜಿಲ್ಲೆಗಳ ಘೋಷಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದ್ದಾರೆ.

ಕೊಪ್ಪಳ: ರಾಜ್ಯದ ಹಲವೆಡೆ ಅನಾವೃಷ್ಟಿಯಾಗಿದ್ದು, ಬರ ಪೀಡಿತ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದೇನೆ. ಆ.31ರೊಳಗೆ ಬರ ಪೀಡಿತ ಜಿಲ್ಲೆ ಎಂದು ಘೋಷಿಸಲು ಸಮಗ್ರ ಸಮೀಕ್ಷೆ ನಡೆಸಿ ಅಂದೇ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಬರ ಪೀಡಿತ ಜಿಲ್ಲೆಗಳನ್ನು ಘೋಷಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದ್ದಾರೆ.

ಕೂಕನೂರು ತಾಲೂಕಿನ ಭಾನಾಪುರ ಗ್ರಾಮದ ಪ್ರವಾಸಿ ಮಂದಿರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದು, ಬರ ಪೀಡಿತ ಪ್ರದೇಶಗಳ ಕುರಿತು ಆ.29ರೊಳಗೆ ಜಂಟಿ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಕಂದಾಯ, ಕೃಷಿ, ತೋಟಗಾರಿಕೆ ಇಲಾಖಾ ಅಧಿಕಾರಿಗಳಿಗೆ ಸೂಚಿಸಲಾಗಿದೆ. 

ಸಮೀಕ್ಷೆ ಪಾರದರ್ಶಕವಾಗಿರಲು ಡ್ರೋನ್‌ ಕ್ಯಾಮರಾ ಬಳಸಲಾಗುತ್ತಿದೆ. ಇದರಿಂದ ಬರದ ನೈಜ ಚಿತ್ರಣ ದೊರೆಯಲು ಅನುಕೂಲವಾಗಲಿದೆ ಎಂದರು.

loader