ಬೆಳಗಾವಿ :  ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಸಮ್ಮಿಶ್ರ ಸರಕಾರ ಪತನವಾಗಿ ಬಿ.ಎಸ್.ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ. 

ಶುಕ್ರವಾರ ಬೆಳಗಾವಿಯಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಮುಖಭಂಗ ಅನುಭವಿಸಿವೆ. ಸಮ್ಮಿಶ್ರ ಸರಕಾರ ಪತನವಾಗಿ ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಪುನರುಚ್ಚರಿಸಿದರು.

ನಿರೀಕ್ಷೆಗೂ ಮೀರಿ ಲೋಕಸಭಾ ‌ಚುನಾವಣೆಯ ಫಲಿತಾಂಶ ಬಂದಿದೆ. ರಾಜ್ಯ ಕಾಂಗ್ರೆಸ್ ನಲ್ಲಿ ಬಾರಿ ಬದಲಾವಣೆಯಾಗಲಿದೆ. ಇದು ಸಮ್ಮಿಶ್ರ ಸರಕಾರದ ಅಂತ್ಯಕ್ಕೆ‌ ನಾಂದಿ ಹಾಡಲಿದೆ ಎಂದು ಭವಿಷ್ಯ‌ ನುಡಿದರು.

ಕಾಂಗ್ರೆಸ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ಬದಲಾವಣೆಯಾಗಲಿದೆ. ಕಾಂಗ್ರೆಸ್ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಲಿ. ರಾಜ್ಯ ರಾಜಕಾರಣದಲ್ಲಿ ಮುಂದಿನವಾರ ದೊಡ್ಡ ಪ್ರಮಾಣದಲ್ಲಿ ಬದಲಾವಣೆಯಾಗುವುದು ಶತಸಿದ್ದ ಎಂದರು.