. ಅಹಮ್ಮದ್ ಪಟೇಲ್ ಗುಜರಾತಿನಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಜಯಗಳಿದ್ದರು. ಇದೇ ಸಂತೋಷದಲ್ಲಿ ಔತಣಕೂಟದಲ್ಲಿ ಪಾಲ್ಗೊಳ್ಳುವಂತೆ ಪಟೇಲ್ ಆಹ್ವಾನ ನೀಡಿದ್ದರು.

ನವದೆಹಲಿ(ಆ.16): ಮತ್ತೆ ಸಂಪುಟ ವಿಸ್ತರಣೆ ಕಸರತ್ತು ದೆಹಲಿ ಅಂಗಳ ತಲುಪಿದೆ. ಸಿಎಂ, ಪರಮೇಶ್ವರ್, ಡಿಕೆಶಿ ಈಗಾಗಲೇ ದೆಹಲಿ ತಲುಪಿದ್ದು, ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿ ಹಾಗೂ ಸಂಪುಟಕ್ಕೆ ಯಾರನ್ನ ಸೇರಿಸಿಕೊಳ್ಳಬೇಕು ಅನ್ನೋದರ ಬಗ್ಗೆ ಇಂದು ಹೈಕಮಾಂಡ್ ಜೊತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹಮ್ಮದ್ ಪಟೇಲ್ ಆಹ್ವಾನದ ಮೇರೆಗೆ ರಾಜ್ಯದ ಕಾಂಗ್ರೆಸ್ ಮುಖಂಡರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಅಹಮ್ಮದ್ ಪಟೇಲ್ ಗುಜರಾತಿನಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಜಯಗಳಿದ್ದರು. ಇದೇ ಸಂತೋಷದಲ್ಲಿ ಔತಣಕೂಟದಲ್ಲಿ ಪಾಲ್ಗೊಳ್ಳುವಂತೆ ಪಟೇಲ್ ಆಹ್ವಾನ ನೀಡಿದ್ದರು. ಹೀಗಾಗಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ , ದಿನೇಶ್​ ಗುಂಡೂರಾವ್, ಎಸ್ ಆರ್ ಪಾಟೀಲ್, ಇಂಧನ ಸಚಿವ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ.