ರಾಜ್ಯ ಸರ್ಕಾರದಿಂದ ಮತ್ತೊಂದು ಭರ್ಜರಿ ಗಿಫ್ಟ್‌!

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 10, Aug 2018, 9:48 AM IST
Soon CM Kumaraswamy Will Give Good News
Highlights

ಮುಖ್ಯಮಂತ್ರಿ ಕುಮಾರಸ್ವಾಮಿ ಶೀಘ್ರದಲ್ಲೇ ರಾಜ್ಯದ ಜನರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಿದ್ದಾರೆ. ಗಣೇಶ ಚತುರ್ಥಿ ವೇಳೆಗೆ ಬಂಪರ್ ಕೊಡುಗೆಯೊಂದನ್ನು ಘೋಷಿಸಲಾಗುವುದು ಎಂದು ಹೇಳಿದ್ದಾರೆ. 

ಬೆಂಗಳೂರು :  ರಾಜ್ಯದ ಜನತೆಗೆ ಸ್ವಾತಂತ್ರ್ಯೋತ್ಸವ ದಿನ ಅಥವಾ ಗಣೇಶ ಚತುರ್ಥಿಗೆ ಮತ್ತೊಂದು ಸಿಹಿ ಸುದ್ದಿ ನೀಡುತ್ತೇನೆ. ಎಲ್ಲರೂ ಕಾತುರದಿಂದ ಕಾಯುತ್ತಿರಿ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಸಾಲ ಮನ್ನಾ ಅಷ್ಟೇ ಅಲ್ಲದೆ ರೈತರು ಹಾಗೂ ಜನ ಸಾಮಾನ್ಯರನ್ನು ಖುಷಿಪಡಿಸುವ ನಿಟ್ಟಿನಲ್ಲಿ ಮತ್ತೊಂದು ಉಡುಗೊರೆ ನೀಡಲು ಮುಂದಾಗಿದ್ದೇನೆ.

ಸಾಧ್ಯವಾದರೆ ಇದೇ ಸ್ವಾತಂತ್ರ್ಯ ದಿನಾಚರಣೆಗೆ ಘೋಷಿಸಲಾಗುವುದು. ತಪ್ಪಿದರೆ, ಗಣೇಶ ಚತುರ್ಥಿಗೆ ಉಡುಗೊರೆ ನೀಡಲಾಗುವುದು ಎಂದು ಹೇಳಿದರು. ಈ ವೇಳೆ ಯಾವ ವಿಚಾರಕ್ಕೆ ಹಾಗೂ ಫಲಾನುಭವಿಗಳು ಯಾರು ಎಂಬ ಬಗ್ಗೆ ವಿವರಣೆ ನೀಡಲು ಮುಖ್ಯಮಂತ್ರಿಗಳು ನಿರಾಕರಿಸಿದರು.

loader