ಶೀಘ್ರದಲ್ಲೇ ಎಚ್.ಡಿ ರೇವಣ್ಣಗೆ ಮುಖ್ಯಮಂತ್ರಿ ಪಟ್ಟ

First Published 25, Jul 2018, 10:44 AM IST
Soon HD Revanna Becom Karnataka CM
Highlights

ಶೀಘ್ರದಲ್ಲೇ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವಾಗಲಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯಾಗಲಿದೆ.  ಎಚ್.ಡಿ ರೇವಣ್ಣ ಮುಖ್ಯಮಂತ್ರಿ ಪಟ್ಟಕ್ಕೇರಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. 

ಹಾಸನ: ಗ್ರಹಣದ ಪರಿಣಾಮದಿಂದಾಗಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವಾ ಗಲಿದ್ದು ಪ್ರಸ್ತುತ ಮೈತ್ರಿ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿರುವ ಎಚ್.ಡಿ. ರೇವಣ್ಣ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ಭವಿಷ್ಯ ನುಡಿದ್ದಾರೆ. 

ತಾಳೆಗರಿ ನೋಡಿ ಭವಿಷ್ಯ ಹೇಳುವ ಶ್ರೀಗಳು ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಮಾತನಾಡಿ, ‘ಅರಸನ ಆಯಸ್ಸು ಉಸಿರಲ್ಲಿ ನಿಂತೀತು ಪರಸಕ್ಕೆ ಭಂಗ ಪ್ರಸಂಗಕ್ಕೆ ಹಾನಿ, ಭ್ರಾತೃ ಬೆಂಕಿ ಹಿಡಿದಾನು’ ಎಂದು ಅವರು ಒಗಟಾಗಿ ತಿಳಿಸಿದ್ದಾರೆ. 

‘ಸಹೋದರ ಬೆಂಕಿ ಹಿಡಿದಾನು ಎಂದರೆ ಸಿಎಂ ಎಚ್.ಡಿ.ಕುಮಾರಸ್ವಾಮಿಯವರ ಸಹೋದರ ಎಚ್.ಡಿ.ರೇವಣ್ಣ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಈ ಭವಿಷ್ಯ ಅರ್ಥ ಮೂಡಿಸುತ್ತದೆ. ಪ್ರಾಕೃತಿಕ ಸಂಪನ್ಮೂಲಗಳು ನಾಶವಾಗಲಿದ್ದು, ಮುಂದಿನ ದಿನಗಳಲ್ಲಿ ಭೂಕಂಪನವಾಗಲಿದೆ. ಇನ್ನೂ ಹೆಚ್ಚು ಮಳೆಯಾಗಲಿದ್ದು, ಬರುವ ವಿಶೇಷ ದಿನಗಳು ಕಷ್ಟಕರವಾಗಲಿದೆ’ ಎಂದೂ ಭವಿಷ್ಯ ನುಡಿದಿದ್ದಾರೆ.

loader