ಅಪವಿತ್ರ ಮೈತ್ರಿಯ ಭಾರಕ್ಕೆ ಮೈತ್ರಿ ಸರ್ಕಾರ ಕುಸಿಯಲಿದೆ ಎಂಬುದನ್ನು ಸರ್ಕಾರದ ಆರಂಭದ ದಿನದಿಂದ ಹೇಳುತ್ತಿದ್ದೇವೆ. ಇದೀಗ ಬೆಳಗಾವಿಯ ಪಿಎಲ್‌ಡಿ ಬ್ಯಾಂಕ್ ಚುನಾವಣೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿ ವಿದೇಶ ಪ್ರವಾಸ ಕೈಗೊಂಡಿರುವುದನ್ನು ಗಮನಿಸಿದರೆ ಸರ್ಕಾರ ಹೆಚ್ಚುದಿನ ಉಳಿಯುವುದಿಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ. 

ಬೆಂಗಳೂರು: ಕಾಂಗ್ರೆಸ್‌ನ ಇತ್ತೀಚಿನ ಬೆಳವಣಿಗೆಗಳು ಹಾಗೂ ಒಳಜಗಳ ನೋಡಿದರೆ ಶೀಘ್ರದಲ್ಲಿ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಭವಿಷ್ಯ ನುಡಿದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪವಿತ್ರ ಮೈತ್ರಿಯ ಭಾರಕ್ಕೆ ಮೈತ್ರಿ ಸರ್ಕಾರ ಕುಸಿಯಲಿದೆ ಎಂಬುದನ್ನು ಸರ್ಕಾರದ ಆರಂಭದ ದಿನದಿಂದ ಹೇಳುತ್ತಿದ್ದೇವೆ. 

ಇದೀಗ ಬೆಳಗಾವಿಯ ಪಿಎಲ್‌ಡಿ ಬ್ಯಾಂಕ್ ಚುನಾವಣೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿ ವಿದೇಶ ಪ್ರವಾಸ ಕೈಗೊಂಡಿರುವುದನ್ನು ಗಮನಿಸಿದರೆ ಸರ್ಕಾರ ಹೆಚ್ಚುದಿನ ಉಳಿಯುವುದಿಲ್ಲ ಎಂದಿದ್ದಾರೆ. 

ಮೈತ್ರಿ ಸರ್ಕಾರದ ಪತನಕ್ಕೆ ಬಿಜೆಪಿ ಕಾರಣವಾಗುವುದಿಲ್ಲ. ಕಾಂಗ್ರೆಸ್‌ನ ಮುಖಂಡರ ಒಳಜಗಳಗಳಿಂದ ಸರ್ಕಾರ ಪತನವಾಗಲಿದೆ. ಆದರೆ, ಮತ್ತೆ ಬಿಜೆಪಿ ಸರ್ಕಾರ ರಚನೆ ಮಾಡಬೇಕೆಂಬ ಹುರುಪಿನಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.