27ರಿಂದ ರಾಜ್ಯದಲ್ಲಿ ಮೋದಿ ಪ್ರಚಾರ?

First Published 12, Apr 2018, 7:36 AM IST
Soon PM Modi Campaign In Karnataka
Highlights

ಬಿಜೆಪಿಯ ಕೊನೆಯ ಹಾಗೂ ಪ್ರಮುಖ ಅಸ್ತ್ರವಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 27ರಿಂದ ರಾಜ್ಯದಲ್ಲಿ ಸತತವಾಗಿ ಚುನಾವಣಾ ಪ್ರಚಾರ ನಡೆಸುವ ಸಾಧ್ಯತೆಯಿದೆ.

ಬೆಂಗಳೂರು : ಬಿಜೆಪಿಯ ಕೊನೆಯ ಹಾಗೂ ಪ್ರಮುಖ ಅಸ್ತ್ರವಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 27ರಿಂದ ರಾಜ್ಯದಲ್ಲಿ ಸತತವಾಗಿ ಚುನಾವಣಾ ಪ್ರಚಾರ ನಡೆಸುವ ಸಾಧ್ಯತೆಯಿದೆ.

ಈ ಸಂಬಂಧ ಪಕ್ಷದ ನಾಯಕರು ಮೋದಿ ಅವರ ಕಾರ್ಯಕ್ರಮದ ರೂಪರೇಷೆ ಸಿದ್ಧಪಡಿಸುತ್ತಿದ್ದು, ಇನ್ನೆರಡು ದಿನಗಳಲ್ಲಿ ಅಂತಿಮಗೊಳ್ಳಲಿದೆ ಎಂದತು ಉನ್ನತ ಮೂಲಗಳು ತಿಳಿಸಿವೆ.

ರಾಜ್ಯದ ಎಲ್ಲ ವಿಭಾಗಗಳಲ್ಲೂ ಮೋದಿ ಅವರು ಪ್ರಚಾರ ನಡೆಸಲಿದ್ದಾರೆ. ಎರಡು ಅಥವಾ ಮೂರು ಜಿಲ್ಲೆಗಳನ್ನು ಒಳಗೊಂಡಂತೆ ಒಂದು ಕಡೆ ಮೋದಿ ಅವರ ಸಮಾವೇಶ ಹಮ್ಮಿಕೊಳ್ಳುವ ಬಗ್ಗೆ ಚಿಂತನೆ ನಡೆದಿದೆ. ಒಂದು ದಿನಕ್ಕೆ ಕನಿಷ್ಠ ಎರಡು ಕಡೆ ಸಮಾವೇಶಗಳನ್ನು ಆಯೋಜಿಸುವ ಸಾಧ್ಯತೆಯಿದೆ. ಮೋದಿ ಅವರ ವರ್ಚಸ್ಸನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ.

ಇದಕ್ಕೆ ಪೂರಕ ಎಂಬಂತೆ ಮೋದಿ ಅವರು ಕೂಡ ಕರ್ನಾಟಕದ ಚುನಾವಣಾ ಪ್ರಚಾರಕ್ಕೆ ಹೆಚ್ಚು ದಿನ ಮೀಸಲಿಡಲು ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಸೂಚನೆ ಮೇರೆಗೆ ಎಲ್ಲೆಲ್ಲಿ ಸಮಾವೇಶ ನಡೆಸಬೇಕು ಎಂಬುದನ್ನು ಅಖೈರುಗೊಳಿಸಲಾಗುವುದು ಎಂದು ತಿಳಿದು ಬಂದಿದೆ.

loader