ಸಿದ್ದರಾಮಯ್ಯ ಅವರ ಆಶಯಕ್ಕೆ ವಿರುದ್ಧವಾದ ಚಟುವಟಿಕೆಗಳು ಮತ್ತು ತೀರ್ಮಾನಗಳು ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿವೆ.  ಸಿದ್ದರಾಮಯ್ಯ ಅವರ ಆಶಯಕ್ಕೆ ವಿರುದ್ಧವಾದ ಚಟುವಟಿಕೆಗಳು ಮತ್ತು ತೀರ್ಮಾನಗಳು ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿವೆ ಎಂದು ಆರ್. ಅಶೋಕ್ ಹೇಳಿದ್ದಾರೆ. 

ಕೆ.ಆರ್.ಪೇಟೆ: ಕಾಂಗ್ರೆಸ್‌ನ ಶಕ್ತಿಯಂತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪಕ್ಷದಿಂದ ಹೊರದಬ್ಬುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಅಶೋಕ್ ಹೇಳಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಅವರ ಆಶಯಕ್ಕೆ ವಿರುದ್ಧವಾದ ಚಟುವಟಿಕೆಗಳು ಮತ್ತು ತೀರ್ಮಾನಗಳು ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿವೆ. 

ಹಾಗಾಗಿ ಇನ್ನು ಕೆಲವೇ ತಿಂಗಳಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ತೊರೆಯುವ ಲಕ್ಷಣಗಳಿವೆ. ಇದಕ್ಕೆ ಸಾಕ್ಷಿ ಎಂಬಂತೆ ಕಳೆದ ವಾರ ಬಾದಾಮಿಯಲ್ಲಿ ಮುಂದಿನ ದಿನಗಳಲ್ಲಿ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿಸಿದರು.