ಜನವರಿ 5 ರಂದು ಗಂಗೂಲಿ ಅವರ ಕಚೇರಿ ವಿಳಾಸಕ್ಕೆ ಅಂಚೆ ಮೂಲಕ ಪತ್ರ ಬಂದಿದೆ ಎಂದು ಗಂಗೂಲಿ ಖಚಿತ ಪಡಿಸಿದ್ದಾರೆ.

ಕೋಲ್ಕತ್ತಾ(ಜ.09): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಕೊಲೆ ಮಾಡುವುದಾಗಿ ಅನಾಮಧೇಯ ಜೀವ ಬೆದರಿಕೆ ಪತ್ರ ಬಂದಿದೆ. ಜನವರಿ 5 ರಂದು ಗಂಗೂಲಿ ಅವರ ಕಚೇರಿ ವಿಳಾಸಕ್ಕೆ ಅಂಚೆ ಮೂಲಕ ಪತ್ರ ಬಂದಿದೆ ಎಂದು ಗಂಗೂಲಿ ಖಚಿತ ಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜನವರಿ 19ರಂದು ಪಶ್ಚಿಮ ಮಿಡ್ನಾಪುರ್ ಜಿಲ್ಲೆಯ ವಿದ್ಯಾಸಾಗರ್ ವಿವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ತಾವು ಹಾಜರಾದರೆ ಗಂಭೀರ ಪರಿಣಾಮ ಎದುರಿಸಲಾಗಬೇಕಾಗುತ್ತದೆ ಎಂದು ಬೆದರಿಕೆ ಪತ್ರದಲ್ಲಿ ತಿಳಿಸಲಾಗಿದೆ. ಆದಾಗ್ಯೂ ಗಂಗೂಲಿ ಅವರು ಜಿಲ್ಲೆಯ ವರಿಷ್ಠಾಧಿಕಾರಿ ಅವರಿಗೆ ತಿಳಿಸಿದ್ದಾರೆ. ಆದರೆ ಅಧಿಕೃತವಾಗಿ ದೂರು ನೀಡಿಲ್ಲ ಎಂದು ನೈರುತ್ಯ ವಿಭಾಗದ ಪೊಲೀಸ್ ಉಪ ಆಯುಕ್ತ ಮೇರಾಜ್ ಖಲೀದ್ ತಿಳಿಸಿದ್ದಾರೆ. ಗಂಗೂಲಿ ಪ್ರಸ್ತುತ ಬಂಗಾಳ ಕ್ರಿಕೆಟ್ ಅಸೋಸಿಯೇಷನ್'ನ ಅಧ್ಯಕ್ಷರಾಗಿದ್ದಾರೆ.