2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಾಗಿರುವ ಉತ್ತರ ಪ್ರದೇಶದ ವಿರೋಧ ಪಕ್ಷಗಳು, ಸೀಟು ಹಂಚಿಕೆ ಸೂತ್ರವನ್ನು ಅಂತಿಮಗೊಳಿಸಿಕೊಂಡಿವೆ.
ಲಖನೌ: 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಾಗಿರುವ ಉತ್ತರ ಪ್ರದೇಶದ ವಿರೋಧ ಪಕ್ಷಗಳು, ಸೀಟು ಹಂಚಿಕೆ ಸೂತ್ರವನ್ನು ಅಂತಿಮಗೊಳಿಸಿಕೊಂಡಿವೆ. ಅದರಂತೆ ಬಿಎಸ್‌ಪಿ ಮತ್ತು ಸಮಾಜವಾದಿ ಪಕ್ಷ ತಲಾ 30 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಕಾಂಗ್ರೆಸ್ 10 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಉತ್ತರ ಪ್ರದೇಶದಲ್ಲಿ 80 ಲೋಕಸಭಾ ಸ್ಥಾನಗಳಿದ್ದು, ಇನ್ನುಳಿದ 10 ಸ್ಥಾನಗಳಲ್ಲಿ ರಾಷ್ಟ್ರೀಯ ಲೋಕ ದಳ (ಆರ್‌ಎಲ್‌ಡಿ) ಉಳಿದ 10 ಸ್ಥಾನಗಳಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ. ಸೀಟು ಹಂಚಿಕೆ ವಿಚಾರದಲ್ಲಿ ವಿರೋಧ ಪಕ್ಷಗಳಲ್ಲಿ ಏನೇ ಭಿನ್ನಾಭಿಪ್ರಾಯಗಳಿದ್ದರೂ ಮಾಯಾವತಿ ನೇತೃತ್ವದ ಬಿಎಸ್‌ಪಿ ಜೊತೆ ಮೈತ್ರಿಯನ್ನು ಮುಂದುವರಿಸುವ ವಿಶ್ವಾಸವನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ವ್ಯಕ್ತಪಡಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 71, ಎಸ್‌ಪಿ 5, ಕಾಂಗ್ರೆಸ್ 2, ಅಪ್ನಾದಳ್ 2 ಸ್ಥಾನ ಗೆದ್ದಿದ್ದವು. ಬಿಎಸ್ಪಿ ಶೂನ್ಯ ಸಂಪಾದನೆ ಮಾಡಿತ್ತು.
