ನವದೆಹಲಿ[ಜು.16]: ದೇಶದ ಮಾಜಿ ಪ್ರಧಾನಿ ಚಂದ್ರಶೇಖರ್‌ ಅವರ ಪುತ್ರ ಹಾಗೂ ಸಮಾಜವಾದಿ ಪಕ್ಷದ ನಾಯಕ ನೀರಜ್‌ ಶೇಖರ್‌ ಅವರು ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಅವರು ಶೀಘ್ರವೇ ಎಸ್‌ಪಿ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ನೀರಜ್‌ ಅವರ ರಾಜೀನಾಮೆಯನ್ನು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಅವರು ಅಂಗೀಕರಿಸಿದ್ದಾರೆ.ರಜ್‌ ಅವರ ಮೇಲ್ಮನೆ ಅವಧಿಯು 2020ರ ನವೆಂಬರ್‌ ಕೊನೆಗೆ ಮುಕ್ತಾಯವಾಗಬೇಕಿತ್ತು.