ಹಳೆ ನೋಟುಗಳ ಚಲಾವಣೆ ರದ್ದು ಮಾಡಿರುವುದರಿಂದ ಕೆಲವೇ ದಿನಗಳಲ್ಲಿ ಚಿಲ್ಲರೆ ಸಮಸ್ಯೆ ಬಗೆಹರಿಯಲಿದೆ. ನಾವೆಲ್ಲಾ ಮೋದಿಗೆ ಬೆಂಬಲಿಸಬೇಕೆಂದು ಎಸ್’ಪಿಬಿ ಹೇಳಿದ್ದಾರೆ.

ಚಿಕ್ಕಬಳ್ಳಾಪುರ (ನ.20): ಗಾನ ಗಾರುಡಿಗ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಪ್ರಧಾನಿ ಮೋದಿಯವರನ್ನು ಹಾಡಿಹೋಗಳಿದ್ದಾರೆ.

ಹಳೆ ನೋಟುಗಳ ಚಲಾವಣೆ ರದ್ದು ಮಾಡಿರುವುದರಿಂದ ಕೆಲವೇ ದಿನಗಳಲ್ಲಿ ಚಿಲ್ಲರೆ ಸಮಸ್ಯೆ ಬಗೆಹರಿಯಲಿದೆ. ನಾವೆಲ್ಲಾ ಮೋದಿಗೆ ಬೆಂಬಲಿಸಬೇಕೆಂದು ಎಸ್’ಪಿಬಿ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಎಸ್​​ಪಿಬಿ, ಮೋದಿ ಈ ದೇಶಕ್ಕೆ ಸಿಕ್ಕ ಅತ್ಯುತ್ತಮ ನಾಯಕ ಎಂದು ಬಣ್ಣಿಸಿದ್ದಾರೆ.