ಬೆಂಗಳೂರಿನ ಕೊಳಚೆ ನೀರನ್ನು ಸಂಸ್ಕರಿಸಿ ಕೋಲಾರದ ಕೆರೆಗಳಿಗೆ ಹರಿಸುವ ಕೆ.ಸಿ. ವ್ಯಾಲಿ ಯೋಜನೆ ಕೆ.ಸಿ. ವ್ಯಾಲಿ ನೀರಿನ ಪರಿಶುದ್ದತೆ ಬಗ್ಗೆ ಆತಂಕ ವ್ಯಕ್ತಪಡಿಸಿ ಸಲ್ಲಿಸಲಾಗಿದ್ದ ಪಿಐಎಲ್ ವಿಚಾರಣೆ

ಬೆಂಗಳೂರು: ಕೆ.ಸಿ. ವ್ಯಾಲಿ ಯೋಜನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಇತ್ಯರ್ಥಪಡಿಸಲು ವಿಶೇಷ ಪ್ರತ್ಯೇಕ ಪೀಠ ರಚನೆಗೆ ನಿರ್ದೇಶನ ನೀಡಿದೆ. 

ಕೆ.ಸಿ. ವ್ಯಾಲಿ ನೀರಿನ ಪರಿಶುದ್ದತೆ ಬಗ್ಗೆ ಆತಂಕ ವ್ಯಕ್ತಪಡಿಸಿ ಸಲ್ಲಿಸಲಾಗಿದ್ದ ಪಿಐಎಲ್ ಆಲಿಸಿದ, ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

ಇದನ್ನೂ ಓದಿ: ‘ಕೆ.ಸಿ. ವ್ಯಾಲಿ’ ಎಂಬ ಸುಂದರ ಹೆಸರಿನ ಯೋಜನೆಯ ‘ಕೊಳಕು’ ಮುಖ

ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಆದಷ್ಟು ಬೇಗ ವಿಶೇಷ ಪೀಠ ರಚಿಸಿ ಪ್ರಕರಣ ಇತ್ಯರ್ಥಪಡಿಸಲು ರಿಜಿಸ್ಟ್ರಾರ್ ಜನರಲ್ ಗೆ ಸೂಚಿಸಿದೆ.

ಬೆಂಗಳೂರಿನ ಕೊಳಚೆ ನೀರನ್ನು ಸಂಸ್ಕರಿಸಿ ಕೋಲಾರದ ಕೆರೆಗಳಿಗೆ ಹರಿಸುವ ಕೆ.ಸಿ. ವ್ಯಾಲಿ ಯೋಜನೆ ಬಗ್ಗೆ ಕೋಲಾರ-ಚಿಕ್ಕಬಳ್ಳಾಪುರದ ಶಾಶ್ವತ ನೀರಾವರಿ ಹೋರಾಟಗಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಕಳೆದ ತಿಂಗಳು ಪ್ರಾಯೋಗಿಕವಾಗಿ ನರಸಾಪುರದ ಬಳಿಯ ಲಕ್ಷ್ಮೀ ಸಾಗರ ಕೆರೆಗೆ ನೀರು ಹರಿಸಲಾಗುತ್ತಿದೆ.

ಇದನ್ನೂ ಓದಿ:‘ಕೆ.ಸಿ. ವ್ಯಾಲಿ ನೀರಿನ ಗುಣಮಟ್ಟ ಅಧ್ಯಯನಕ್ಕೆ ಸಮಿತಿ ರಚಿಸಿ’