Asianet Suvarna News Asianet Suvarna News

ಸಿದ್ದರಾಮಯ್ಯಗೆ ಸಂಕಷ್ಟ: ವಿಚಾರಣೆಗೆ ಬರುವಂತೆ ಕೋರ್ಟ್ ಸಮನ್ಸ್

ಮೈತ್ರಿ ಸರ್ಕಾರ ಪತನದ ವಿಚಾರಕ್ಕೆ ದೇವೇಗೌಡ ಹಾಗೂ ಸಿದ್ದರಾಮಯ್ಯ ನಡುವೆ ವಾಕ್ಸಮರ ನಡೆದಿದೆ. ದೇವೇಗೌಡರು ತಮ್ಮ ವಿರುದ್ಧ ಮಾಡಿದ ಆರೋಪಗಳಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತೀಕ್ಷ್ಣ ತಿರುಗೇಟು ನೀಡಿದ್ದಾರೆ. ಈ ರಾಜಕೀಯ ತಿಕ್ಕಾಟ ಮಧ್ಯೆ ಸಿದ್ದರಾಮಯ್ಯಗೆ ಮತ್ತೆ ಎದುರಾಯ್ತು ಭೂ ಸಂಕಷ್ಟ ಎದುರಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್ ನೀಡಿದೆ.

special court issues summons to siddaramaiah over Land Denotification Case in Mysuru
Author
Bengaluru, First Published Aug 23, 2019, 9:47 PM IST

ಬೆಂಗಳೂರು, [ಆ.23]: ಅಕ್ರಮ ಡಿನೋಟಿಫಿಕೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ನೀಡಿದೆ.

ಸಿದ್ದರಾಮಯ್ಯ ಹಾಗೂ ಇತರರಿಗೆ ಇದೇ ಸೆಪ್ಟೆಂಬರ್ 23ಕ್ಕೆ ಕೋರ್ಟ್ ಗೆ ಹಾಜರಾಗುವಂತೆ ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ಇಂದು [ಶುಕ್ರವಾರ] ಸಮನ್ಸ್ ನೀಡಿದೆ. 

1997ರಲ್ಲಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ಮೈಸೂರಿನ ಹಿನಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ಡಿನೋಟಿಫಿಕೇಷನ್ ಆಗಿದ್ದ 10 ಗುಂಟೆ ಜಮೀನು ಖರೀದಿಸಿದ್ದರು. ನಂತರ 2003ರಲ್ಲಿ ಮನೆ ನಿರ್ಮಾಣ ಮಾಡಿ ಮಾರಾಟ ಮಾಡಿದ್ದರು.

ಈ ಪ್ರಕರಣವನ್ನು ಮೈಸೂರಿನ ಲಕ್ಷ್ಮಿಪುರಂ ಪೊಲೀಸರ ಬಿ ರಿಪೋರ್ಟ್ ಹಾಕಿದ್ದರು. ಆದ್ರೆ ಇದೀಗ ಜನಪ್ರತಿನಿಧಿಗಳ ಕೋರ್ಟ್, ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ತಿರಸ್ಕಾರ ಮಾಡಿದ್ದು, ವಿಚಾರಣೆಗೆ ಅಸ್ತು ಎಂದಿದೆ.

ಈ ಮೂಲಕ ಸಿದ್ದರಾಮಯ್ಯಗೆ ಮತ್ತೆ ಭೂ ಸಂಕಷ್ಟ ಎದುರಾಗಿದೆ.

Follow Us:
Download App:
  • android
  • ios