ನವದೆಹಲಿ: ಶಾಸಕ ಹಾಗೂ ಸಂಸದರ ವಿರುದ್ಧ ದಾಖಲಾಗಿರುವ ಗಂಭೀರ ಅಪರಾಧ ಪ್ರಕರಣಗಳ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರವು ಹೇಳಿದೆ.

ನವದೆಹಲಿ: ಶಾಸಕ ಹಾಗೂ ಸಂಸದರ ವಿರುದ್ಧ ದಾಖಲಾಗಿರುವ ಗಂಭೀರ ಅಪರಾಧ ಪ್ರಕರಣಗಳ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರವು ಹೇಳಿದೆ.

ಗಂಭೀರ ಅಪರಾಧ ಪ್ರಕರಣಗಳಲ್ಲಿ ದೋಷಿಯೆಂದು ಸಾಬೀತಾಗಿರುವ ಶಾಸಕರು ಹಾಗೂ ಸಂಸದರ ವಿಚಾರಣೆ ನಡೆಸಲು ದೇಶದ ವಿವಿದೆಡೆ 12 ವಿಶೇಷ ಕೋರ್ಟ್’ಗಳನ್ನು ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರವು ಇಂದು ಸುಪ್ರೀಂ ಕೋರ್ಟಿನಲ್ಲಿ ಅಫಿಡಾವಿಟ್ ಸಲ್ಲಿಸಿದೆ.

ಅಪರಾಧ ಪ್ರಕರಣಗಳಲ್ಲಿ ದೋಷಿಯೆಂದು ಸಾಬೀತಾಗಿರುವ ಶಾಸಕರು ಹಾಗೂ ಸಂಸದರಿಗೆ ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ಜೀವಾವಧಿ ನಿಷೇಧ ಹೇರುವ ಬಗ್ಗೆ ಸಲ್ಲಿಸಲಾದ ಸಾರ್ಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.